ಟಿಪ್ಪು ಜಯಂತಿ ಆಚರಣೆ; ಪೊಲೀಸ್ ಉನ್ನತಾಧಿಕಾರಿಗಳೊಂದಿಗೆ ಉಪ ಮುಖ್ಯಮಂತ್ರಿ ಮಹತ್ವದ ಚರ್ಚೆ

ಬೆಂಗಳೂರು, ನ.5-ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪೆÇಲೀಸ್ ಉನ್ನತಾಧಿಕಾರಿಗಳೊಂದಿಗೆ ಮಹತ್ವದ ಚರ್ಚೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಟಿಪ್ಪು ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್‍ಪಂತ್ ಸೇರಿದಂತೆ ಎಲ್ಲಾ ವಲಯಗಳ ಐಜಿಪಿಗಳು, ನಗರ ಪೆÇಲೀಸ್ ಆಯುಕ್ತರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಪರಮೇಶ್ವರ್ ಚರ್ಚಿಸಿದರು.

ಟಿಪ್ಪು ಜಯಂತಿ ವಿಷಯವನ್ನು ಮುಂದಿಟ್ಟು ಒಂದು ವಾರದಿಂದ ಬಿಜೆಪಿ ನಾಯಕರು ಜನರನ್ನು ಪ್ರಚೋದಿಸುವ ಹೇಳಿಕೆ ನೀಡುತ್ತಿದ್ದಾರೆ. ಧರಣಿ ನಡೆಸುವುದಾಗಿಯೂ ಎಚ್ಚರಿಕೆ ನೀಡಿದ್ದಾರೆ. ಆದ್ದರಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಅಹಿತಕರ ಘಟನೆ ನಡೆದರೆ ಆಯಾ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಯವರನ್ನು ಹೊಣೆ ಮಾಡಲಾಗುತ್ತದೆ ಎಂದು ಪರಮೇಶ್ವರ್ ಸಭೆಯಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಟಿಪ್ಪು ಜಯಂತಿ ಸರ್ಕಾರದ ಕಾರ್ಯಕ್ರಮವಾಗಿದ್ದು, ಇದನ್ನು ಯಶಸ್ವಿಯಾಗಿ ನಡೆಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಈ ಹಿಂದೆ ನಡೆದ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ನಿಗಾ ವಹಿಸಬೇಕು ಎಂದು ಸೂಚನೆಯನ್ನು ಗೃಹ ಸಚಿವರು ಪೆÇಲೀಸ್ ಅಧಿಕಾರಿಗಳಿಗೆ ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ