ಬೆಂಗಳೂರು: ಕಾನೂನು ಸುವ್ಯವಸ್ಥೆ ಹಾಗೂ ಸುರಕ್ಷತೆ ದೃಷ್ಟಿಯಿಂದ ನ.10 ರಂದು ನಡೆಯಲಿರುವ ಟಿಪ್ಪುಜಯಂತಿ ಆಚರಣೆಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದ ಬದಲು ರವೀಂದ್ರ ಕಲಾಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆ ಒಳಗೆ ಮಾಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಭದ್ರತೆ ಸಂಬಂಧ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಟಿಪ್ಪುಜಯಂತಿ ವೇಳೆ ಪರ ಅಥವಾ ವಿರೋಧ ಯಾವುದೇ ರೀತಿಯ ಮೆರವಣಿಗೆಗೆ ಅವಕಾಶ ನೀಡುವಂತಿಲ್ಲ.. ಎಲ್ಲ ಜಿಲ್ಲೆಗಳಲ್ಲೂ ಸಭಾಂಗಣದಲ್ಲಿ ಮಾತ್ರ ಆಚರಣೆಗೆ ಅವಕಾಶ ನೀಡಬೇಕು. ಜಯಂತಿ ಆಚರಣೆಯ ಸ್ಥಳ ಹೊರತು ಪಡಿಸಿ ಬೇರೆಡೆ ಪೋಸ್ಟರ್, ಬ್ಯಾನರ್ ಹಾಕುವಂತಿಲ್ಲ..
*ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ, ಪ್ರಚೋದನಾಕಾರಿ ಪೋಸ್ಟ್ ಹಾಕುವವರ ವಿರುದ್ಧವೂ ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಭದ್ರತೆ ದೃಷ್ಟಿಯಿಂದ ಈ ಆಚರಣೆಯನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಕಳೆದ ಬಾರಿ ಬ್ಯಾಂಕ್ಟೆಟ್ ಹಾಲ್ನಲ್ಲಿ ಆಚರಣೆ ಮಾಡಿದ್ದರೆ ಸಾಕಷ್ಟು ಸಮಸ್ಯೆ ಎದುರಾಗಿತ್ತು. ಹೀಗಾಗಿ ಸ್ಥಳ ಬದಲಾವಣೆ ಮಾಡಿದ್ದೇವೆ. ಸರಕಾರದ ವತಿಯಿಂದ ಆಚರಿಸುವ ಎಲ್ಲ ಜಯಂತಿಗಳೂ ರವೀಂದ್ರ ಕಲಾಕ್ಷೇತ್ರದಲ್ಲಿಯೇ ಮಾಡುವುದರಿಂದ ಟಿಪ್ಪು ಜಯಂತಿ ಕೂಡ ಇಲ್ಲಿಯೇ ಅಚರಣೆ ಮಾಡಲು ಸೂಚಿಸಲಾಗಿದೆ ಎಂದರು.
ಎಲ್ಲ ಜಿಲ್ಲೆಗಳಲ್ಲೂ ಜಯಂತಿ ಆಚರಣೆಗೆ ಎಸ್ಪಿ ಹಾಗೂ ಡಿಸಿಗಳಿಗೆ ಸೂಚನೆ ನೀಡಲಾಗಿದೆ.ಇದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ.
ಬೇರೆ ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ನಮ್ಮ ಕೆಎಸ್ ಆರ್ಪಿ ಬೆಟಾಲಿಯನ್ ಕಳುಹಿಸಿದ್ದೇವೆ. ಹೀಗಾಗಿ
ರ್ಯಾಪಿಡ್ ಆ್ಯಕ್ಷನ್ ಫೋರ್ಸ್ ನನ್ನು ಟಿಪ್ಪು ಜಯಂತಿಗೆ ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.
ಆಚರಣೆ ಸಂದರ್ಭದಲ್ಲಿ ಗಲಭೆ, ಶಾಂತಿ ಭಂಗ ಮಾಡಲು ಪ್ರಯತ್ನ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಾಂತಿಭಂಗ ಮಾಡುವ ಹೇಳಿಕೆಯನ್ನು ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತೇವೆ..
ರಾಜ್ಯ ಸರಕಾರ ಕಳೆದ ಮೂರು ವರ್ಷದಿಂದ ಆಚರಣೆ ಮಾಡುತ್ತಿದ್ದೇವೆ. ಕೆಲವರು ಈ ಜಯಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿರುವುದರಿಂದ ಇಷ್ಟೆಲ್ಲ ಭದ್ರತೆ ನಿಯೋಜಿಸಲಾಗಿದೆ ಎಂದರು.
Tippu jayanti,Safety Purpose,DCM G parameshwar