ಎಚ್1ಎನ್1 ರೋಗ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ

ಬೆಂಗಳೂರು, ನ.5- ರಾಜ್ಯದಲ್ಲಿ ಎಚ್1ಎನ್1 ರೋಗ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಅಗತ್ಯ ಔಷಧಿಗಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜಿಲ್ಲಾ ಆಸ್ಪತ್ರೆವರೆಗೂ ಎಲ್ಲಾ ಆಸ್ಪತ್ರೆಗಳಿಗೂ ಪೂರೈಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗದ ಲಕ್ಷಣ ಕಂಡು ಬಂದ ಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆಯುವುದು ಸೂಕ್ತ ಎಂದು ಹೇಳಿದರು.
ರಾಜ್ಯದಲ್ಲಿ ಎಚ್1ಎನ್1 ರೋಗ ನಿಯಂತ್ರಣದಲ್ಲಿದ್ದು ನವೆಂಬರ್ ನಂತರ ಕಡಿಮೆಯಾಗಲಿದೆ. ಕಳೆದ ವರ್ಷ ಈ ರೋಗದಿಂದ 17 ಮಂದಿ ಮೃತಪಟ್ಟಿದ್ದರು. ಈ ವರ್ಷ ಇದುವರೆಗೆ 19 ಮಂದಿ ಮೃತಪಟ್ಟಿರುವುದು ವರದಿಯಾಗಿದೆ.

ಎಚ್1ಎನ್1 ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೂ ರೋಗ ನಿರೋಧಕ ಲಸಿಕೆಗಳನ್ನು ನೀಡಲಾಗಿದೆ. ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಎರಡು ಮೂರು ಸಭೆಗಳನ್ನು ನಡೆಸಲಾಗಿದೆ. ಬೆಂಗಳೂರಿನಲ್ಲೂ ಕೂಡ ಈ ರೋಗ ನಿಯಂತ್ರಣದ ಬಗ್ಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸಭೆ ನಡೆಸಿ ಅಗತ್ಯ ನಿರ್ದೇಶನ ನೀಡಿದ್ದಾರೆಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ