ಬೆಂಗಳೂರು, ನ.5-ಸಿದ್ದಗಂಗಾ ಮಠದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯಿಂದ ನೀರೊದಗಿಸುವ ಕುರಿತಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಟಿಪ್ಪು ಜಯಂತಿ ಆಚರಣೆ ಕುರಿತಂತೆ ಪೆÇಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಠದಲ್ಲಿ ಒಂದು ಸಾವಿರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಲ್ಲಿನ ಬೋರ್ವೆಲ್ಗಳು ವಿಫಲವಾಗಿವೆ. ಹೀಗಾಗಿ ನೀರಿನ ಕೊರತೆ ಎದುರಾಗಿರಬಹುದು. ಕುಡಿಯುವ ನೀರಿಗಾಗಿ ಹೇಮಾವತಿಯಿಂದ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಲಾಗಿದೆ ಎಂದರು.
ರಾಘವೇಶ್ವರ ಶ್ರೀಗಳ ಕುರಿತಂತೆ ಕೇಳಿದ ಪ್ರಶ್ನೆಗೆ, ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮಕೈಗೊಳ್ಳಬೇಕೋ ಅದನ್ನು ಮುಲಾಜಿಲ್ಲದೆ ಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.
ಸಾಣೇಹಳ್ಳಿ ಶ್ರೀಗಳ ಅಸಮಾಧಾನದ ಬಗ್ಗೆ ತಪ್ಪಾಗಿ ಅರ್ಥೈಸುವುದು ಬೇಡ ಎಂದ ಅವರು, ಶಿಷ್ಟಾಚಾರದಂತೆ ನಡೆದುಕೊಳ್ಳಲಾಗಿತ್ತು. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡಿ ಎಂದುತಿಳಿಸಿದರು.