ದೇವಸ್ಥಾನ ಚಟುವಟಿಕೆಯಲ್ಲಿ ಹಸ್ತಕ್ಷೇಪ ಸಲ್ಲ; ಭದ್ರತೆ ನೀಡುವುದಷ್ಟೇ ನಿಮ್ಮ ಕೆಲಸ: ಕೇರಳ ಹೈಕೋರ್ಟ್

ಕೊಚ್ಚಿ: ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ದೈನಂದಿನ ಚಟುವಟಿಕೆಗಳಲ್ಲಿ ಸರ್ಕಾರ ಹಸ್ತಕ್ಷೇಪ ಮಾಮಾಡಬಾರದು ಭಕ್ತರಿಗೆ ಭದ್ರತೆ ನೀಡುವುದಷ್ಟೇ ಸರ್ಕಾರದ ಕೆಲಸ ಎಂದು ಕೇರಳ ಹೈಕೋರ್ಟ್ ಹೇಳಿದೆ.

ದೇವಸ್ಥಾನದ ಚಟುವಟಿಕೆಗಳಲ್ಲಿ ರಾಜ್ಯ ಸರ್ಕಾರ ಹಸ್ತಕ್ಷೇಪ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡಿನ ರಮೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈ ಕೋರ್ಟ್, ಭಕ್ತರು ಅಯ್ಯಪ್ಪಸ್ವಾಮಿ ದರ್ಶನ ಪಡೆಯಲು ಕಷ್ಟಕರವಾಗಿರುವುದಕ್ಕೆ ಸರ್ಕಾರ ಮತ್ತು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದೆ.

ದೇವಸ್ಥಾನದ ಆಡಳಿತ ಮಂಡಳಿ ಮೇಲೆ ಯಾವುದೇ ಪರಿಸ್ಥಿತಿಯಲ್ಲೂ ಒತ್ತಡ ಹಾಕಬಾರದು ಮತ್ತು ದೈನಂದಿನ ವ್ಯವಹಾರಗಳನಲ್ಲೂ ಹಸ್ತಕ್ಷೇಪ ಮಾಡಬಾರದು. ಕಾನೂನು ಸುವ್ಯವಸ್ಥೆ ಕಾಪಾಡುವುದಷ್ಟೇ ಸರ್ಕಾರದ ಕೆಲಸ ಎಂದು ನ್ಯಾಯಾಲಯ ಸೂಚಿಸಿದೆ.

Sabarimale temple,Kerala High Court

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ