ಬೆಂಗಳೂರು, ನ.5- ಟಿಪ್ಪು ಜಯಂತಿ ಆಚರಣೆ ಸಂದರ್ಭದಲ್ಲಿ ಯಾರೇ ಶಾಂತಿಭಂಗ ಮಾಡಿದರೂ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಪೆÇಲೀಸರಿಗೆ ಸೂಚನೆ ನೀಡಿದರು.
ನವೆಂಬರ್ 10ರಂದು ನಡೆಯುವ ಟಿಪ್ಪು ಜಯಂತಿ ಕಾರ್ಯಕ್ರಮದ ಅಂಗವಾಗಿ ಹಿರಿಯ ಪೆÇಲೀಸ್ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿಂದು ಪೂರ್ವಭಾವಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಟಿಪ್ಪು ಜಯಂತಿ ನಡೆಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಭದ್ರತೆ ದೃಷ್ಟಿಯಿಂದ ಬೆಂಗಳೂರಿನಲ್ಲಿ ವಿಧಾನಸೌಧದ ಬದಲಾಗಿ ರವೀಂದ್ರ ಕಲಾ ಕ್ಷೇತ್ರದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅವಕಾಶ ನೀಡಲಾಗಿದೆ. ಬ್ಯಾಂಕ್ವೆಟ್ ಹಾಲ್ನಲ್ಲಿ ಆಚರಣೆ ಮಾಡಿದರೆ ಸಾಕಷ್ಟು ಸಮಸ್ಯೆ ಎದುರಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳ ಬದಲಾವಣೆ ಮಾಡಿದ್ದೇವೆ. ಸರ್ಕಾದ ವತಿಯಿಂದ ಆಚರಿಸುವ ಎಲ್ಲಾ ಜಯಂತಿಗಳು ರವೀಂದ್ರ ಕಲಾ ಕ್ಷೇತ್ರದಲ್ಲೇ ನಡೆಯುವುದರಿಂದ ಟಿಪ್ಪು ಜಯಂತಿ ಕೂಡ ಅಲ್ಲಿಯೇ ಆಚರಣೆ ಮಾಡಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಮೂರು ವರ್ಷಗಳ ಹಿಂದೆ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ. ಜಯಂತಿ ಸಂದರ್ಭದಲ್ಲಿ ಯಾವುದೇ ಪರ ಅಥವಾ ವಿರೋಧದ ಮೆರವಣಿಗೆ ಮಾಡುವಂತಿಲ್ಲ. ಎಲ್ಲಾ ಜಿಲ್ಲೆಗಳಲ್ಲೂ ಜಯಂತಿ ಕಾರ್ಯಕ್ರಮವನ್ನು ಒಳಾಂಗಣ ಸಭಾಂಗಣದಲ್ಲಿ ಮಾತ್ರ ಮಾಡಬೇಕು, ಯಾವುದೇ ರೀತಿಯ ಬ್ಯಾನರ್ ಹಾಕದಂತೆ ಸೂಚಿಸಲಾಗಿದೆ. ಆಚರಣೆಯ ಸ್ಥಳ ಹೊರತುಪಡಿಸಿ ಬೇರೆಡೆ ಪೆÇೀಸ್ಟರ್, ಬ್ಯಾನರ್ ಕಟ್ಟುವಂತಿಲ್ಲ ಎಂದು ತಿಳಿಸಿದರು.
ಸಾಮಾಜಿಕ ಜಾಲತಾಣದಲ್ಲಿ ಟಿಪ್ಪು ಕುರಿತು ಅವಹೇಳನ ಹಾಗೂ ಪ್ರಚೋದನಾಕಾರಿ ಪೆÇೀಸ್ಟ್ ಹಾಕುವವರ ವಿರುದ್ಧವೂ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ. ಭದ್ರತೆಗಾಗಿ 10 ಕಂಪನಿ ಆರ್ಎಎಫ್ ತುಕಡಿಗಳನ್ನು ನಿಯೋಜಿಸಲಾಗುವುದು ಎಂದು ಪರಮೇಶ್ವರ್ ವಿವರ ನೀಡಿದರು.
ಬೇರೆ ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ನಮ್ಮ ಕೆಎಸ್ಆರ್ಪಿ ಬೆಟಾಲಿಯನ್ ಅಲ್ಲಿಗೆ ಕಳುಹಿಸಿದ್ದೇವೆ. ಹೀಗಾಗಿ ಆರ್ಎಎಫ್ ತುಕಡಿಗಳನ್ನು ಟಿಪ್ಪು ಜಯಂತಿ ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಜಯಂತಿ ಆಚರಣೆ ಸಂದರ್ಭದಲ್ಲಿ ಗಲಭೆ, ಶಾಂತಿ ಭಂಗ ಮಾಡಿದರೆ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲಾಗುವುದು. ಶಾಂತಿಭಂಗ ಮಾಡುವ ಹೇಳಿಕೆಯನ್ನೂ ಪರಿಶೀಲಿಸಿ ಕ್ರಮತೆಗೆದುಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಟಿಪ್ಪು ಜಯಂತಿ ಆಚರಣೆ ಮಾಡುತ್ತಾ ಬರುತ್ತಿದೆ. ಕೆಲವರು ಜಯಂತಿಗೆ ಭಂಗ ತರುವ ಹೇಳಿಕೆ ನೀಡುತ್ತಿರುವುದರಿಂದ ಇಷ್ಟೆಲ್ಲಾ ಭದ್ರತೆ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಈ ಹಿಂದೆ ಕುಮಾರಸ್ವಾಮಿ ಅವರು ಟಿಪ್ಪು ಜಯಂತಿ ವಿರೋಧಿ ಹೇಳಿಕೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕುಮಾರಸ್ವಾಮಿ ಅವರು ಆಗ ವೈಯಕ್ತಿಕವಾಗಿ ಹೇಳಿಕೆ ನೀಡಿದ್ದರು. ಇದು ಮೈತ್ರಿ ಸರ್ಕಾರ. ಅಲ್ಲದೆ ಹಿಂದಿನ ಸರ್ಕಾರದಲ್ಲಿ ತೆಗೆದುಕೊಂಡ ಎಲ್ಲಾ ಕಾರ್ಯಕ್ರಮಗಳನ್ನು ಮುಂದುವರಿಸುವ ವಾಗ್ದಾನದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕರಾದ ನೀಲಮಣಿ ಎನ್.ರಾಜು, ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ಪಂಥ್ ಸೇರಿದಂತೆ ಎಲ್ಲಾ ವಲಯಗಳ ಐಜಿಪಿಗಳು, ನಗರ ಪೆÇಲೀಸ್ ಆಯುಕ್ತರು ಹಾಗೂ ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು.