ಉಪಚುನಾವಣೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ: ಮಾಜಿ ಸಚಿವ ಸುರೇಶ್‍ಕುಮಾರ್

ಬೆಂಗಳೂರು, ನ.6-ರಾಜ್ಯ ವಿಧಾನಸಭೆ ಹಾಗೂ ಲೋಕಸಭೆ ಉಪಚುನಾವಣೆಗಳ ಫಲಿತಾಂಶದಿಂದ ಬಿಜೆಪಿ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಬಿಜೆಪಿ ಮುಖಂಡ ಮಾಜಿ ಸಚಿವ ಸುರೇಶ್‍ಕುಮಾರ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎರಡು ವಿಧಾನಸಭೆ ಹಾಗೂ ಮೂರು ಲೋಕಸಭೆ ಚುನಾವಣೆಯ ಬಗ್ಗೆ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಂದರ್ಭವನ್ನು ಸೃಷ್ಟಿ ಮಾಡಿದೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆ ಐದು ಉಪಚುನಾವಣೆಗಳ ಮತ ಎಣಿಕೆ ನಡೆಯುತ್ತಿದ್ದ ಸಂದರ್ಭದಲ್ಲೇ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಶಿವಮೊಗ್ಗ ಹೊರತು ಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಹಿನ್ನಡೆ ಅನುಭವಿಸುತ್ತಿರುವುದನ್ನು ಗಮನಿಸಿದ ಸುರೇಶ್‍ಕುಮಾರ್ ಉಪಚುನಾವಣೆ ಬಗ್ಗೆ ಗಂಭೀರವಾಗಿ ಪಕ್ಷದ ನಾಯಕರು ಚರ್ಚೆ ಮಾಡುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ