ಬೆಂಗಳೂರು: ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದೇ ಹೇಲಲಾಗುತ್ತಿರುವ 5 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಹೊರಬೀಳಲಿದ್ದು, ಐದು ಕ್ಷೇತ್ರದಲ್ಲಿ ಮತ ಎಣಿಕೆ ಪ್ರಾರಂಭವಾಗಿದೆ. ಮಧ್ಯಾಹ್ನದೊಳಗೆ ಫಲಿತಾಂಶದ ಸಂಪೂರ್ಣ ಚಿತ್ರಣ ಹೊರಬೀಳಲಿದೆ.
ಮಂಡ್ಯ, ಬಳ್ಳಾರಿ, ಜಮಖಂಡಿ, ಶಿವಮೊಗ್ಗ, ರಾಮನಗರ ಕ್ಷೇತ್ರಗಳಲ್ಲಿ ನ.3ರಂದು ಉಪಚುನಾವಣೆ ನಡೆದಿತ್ತು. ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಮತ್ತಿತರ ಪ್ರಮುಖ ನಾಯಕರಿಗೆ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆಯಾಗಿದೆ.
ಮೈತ್ರಿ ಸರ್ಕಾರದ ಮುಖಂಡರಿಗೆ ಸರ್ಕಾರ ಉಳಿಸಿಕೊಳ್ಳುವ ಸವಾಲಾದರೆ, ಬಿಜೆಪಿ ನಾಯಕರು ಸರ್ಕಾರ ಉರುಳಿಸುವ ಆಶಯದಲ್ಲಿ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ. ರಾಮನಗರದಲ್ಲಿ ಚನಾವಣೆ ಪೂರ್ವದಲ್ಲೇ ಅಭ್ಯರ್ಥಿಯ ಪಕ್ಷಾಂತರದಿಂದ ಬಿಜೆಪಿ ಮುಖಭಂಗ ಅನುಭವಿಸಿದ್ದು, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಅನಿತಾ ಕುಮಾರಸ್ವಾಮಿಗೆ ಗೆಲುವು ಅನಾಯಾಸವಾಗಿ ಒಲಿದುಬರಲಿದೆ.
Karnataka, By-Election Results