ಬೆಂಗಳೂರು, ನ.6- ರಾಜ್ಯದ ಉಪಚುನಾವಣೆ ಫಲಿತಾಂಶದ ಮೂಲಕ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಮುಂದಾಗುವವರಿಗೆ ಜನರೇ ಉತ್ತರ ನೀಡಿದ್ದಾರೆಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.
ಉಪಚುನಾವಣೆ ಫಲಿತಾಂಶದ ಬಗ್ಗೆ ಟ್ವಿಟ್ ಮಾಡಿರುವ ಗೌಡರು, ರಾಜ್ಯದ ಎರಡು ವಿಧಾನಸಭೆ ಹಾಗೂ ಮೂರು ಲೋಕಸಭಾ ಕ್ಷೇತ್ರಗಳ ಫಲಿತಾಂಶ ಸಮ್ಮಿಶ್ರ ಸರ್ಕಾರದ ಪರವಾಗಿದೆ ಎಂದಿದ್ದಾರೆ. ಅಭಿವೃದ್ಧಿ ಕೇಂದ್ರಿತ ಆಡಳಿತವನ್ನು ಬೆಂಬಲಿಸುತ್ತಿರುವ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಯತ್ನ ನಡೆಸಿದ ಬಿಜೆಪಿಯನ್ನು ಗುರಿಯಾಗಿರಿಸಿಕೊಂಡು ಪರೋಕ್ಷವಾಗಿ ಗೌಡರು ಈ ರೀತಿ ಟ್ವಿಟ್ ಮಾಡಿದ್ದಾರೆ.