ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆ: ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಚ್.ಡಿ.ರೇವಣ್ಣ

ಬೆಂಗಳೂರು, ನ.6- ರಾಜ್ಯದಲ್ಲಿ ಕಾಂಗ್ರೆಸ್ ಮೈತ್ರಿಯೊಂದಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾಡಿದ ಒಳ್ಳೆಯ ಆಡಳಿತದಿಂದಾಗಿ ಈ ಫಲಿತಾಂಶ ಬರಲು ಕಾರಣವಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ಮೈತ್ರಿ ಅಭ್ಯರ್ಥಿಗಳ ಗೆಲುವಿನ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕುಮಾರಸ್ವಾಮಿ ಅವರು ಆಡಳಿತ ವಹಿಸಿಕೊಂಡ ಬಳಿಕ ಮಾಡಿದ ರೈತರ ಸಾಲ ಮನ್ನಾ ಫಲವಾಗಿ ಈ ಉಪ ಚುನಾವಣೆಯಲ್ಲಿ ಮತದಾರರು ಆಶೀರ್ವದಿಸಿದ್ದಾರೆ. ಇದನ್ನು ನೋಡಿಯಾದರೂ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡು ಜನಪರ ಕೆಲಸ ಮಾಡಬೇಕಿದೆ ಎಂದು ಹೇಳಿದರು.

2019ರ ಚುನಾವಣೆ ಹಿನ್ನೆಲೆಯಲ್ಲಾದರೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರಕ್ಕೆ ನೆರವು ನೀಡುವಂತೆ ಮನವಿ ಮಾಡಬೇಕೆಂದು ಇದೇ ವೇಳೆ ಅವರು ಸಲಹೆ ನೀಡಿದರು.
ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಜನತೆಗೆ ಧನ್ಯವಾದ ಸಲ್ಲಿಸಿದ ಅವರು, ಶಿವಮೊಗ್ಗ ಕ್ಷೇತ್ರದಲ್ಲಿ ಹಣ ಬಲ ಕೆಲಸ ಮಾಡಿದಂತೆ ಕಾಣಿಸುತ್ತಿದೆ. ಬಳ್ಳಾರಿಯಲ್ಲಿನ ಫಲಿತಾಂಶ ಉತ್ತಮ ಎನಿಸಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ