ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕದಲ್ಲಿ ಕನ್ನಡ ರಾಜ್ಯೋತ್ಸವ

ಬೆಂಗಳೂರು, ನ.6-ಕೆಎಸ್‍ಆರ್‍ಟಿಸಿ, ಬೆಂಗಳೂರು ಕೇಂದ್ರೀಯ ವಿಭಾಗಘಟಕ 4ರಲ್ಲಿ 63 ನೇ ಕನ್ನಡ ರಾಜ್ಯೋತ್ಸವ ಹಾಗೂ ನಾಡಪ್ರಭುಕೆಂಪೇಗೌಡ ಜಯಂತಿಯನ್ನು ಅಖಿಲ ಕರ್ನಾಟಕ ಒಕ್ಕಲಿಗ ಸಮುದಾಯದ ನೌಕರರು ಹಾಗೂ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂz Àಆಚರಿಸಲಾಯಿತು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠಾಧೀಶರಾದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ತಾಯಿ ಭುವನೇಶ್ವರಿಗೆ ಹಾಗೂ ನಾಡಪ್ರಭುಕೆಂಪೇಗೌಡರಿಗೆ ಪುಷ್ಪನಮನ ಸಲ್ಲಿಸಿದರು.
ಘಟಕದಆವರಣದಲ್ಲಿರಕ್ತದಾನ ಶಿಬಿರ,ಗಿಡ ನೆಡುವ ಕಾರ್ಯಕ್ರಮ, ಶಾಲಾ ಮಕ್ಕಳಿಗೆ ಪುಸ್ತಕಗಳ ವಿತರಣೆ ಹಮ್ಮಿಕೊಳ್ಳಲಾಗಿತ್ತು.
ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್, ಕಿದ್ವಾಯಿಕ್ಯಾನ್ಸರ್ ಸಂಸ್ಥೆ ನಿರ್ದೇಶಕ ಡಾ.ಸಿ.ರಾಮಚಂದ್ರ, ನಿವೃತ್ತ ಐಎಫ್‍ಎಸ್ ಅಧಿಕಾರಿ ಶ್ರೀಕಂಠಯ್ಯ, ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಭಾಕರರೆಡ್ಡಿ ಮತ್ತು ಕೆ.ಟಿ.ಚಂದ್ರು, ಕೆಎಸ್‍ಆರ್‍ಟಿಸಿ ಬೆಂಗಳೂರು ಕೇಂದ್ರೀಯ ವಿಭಾಗದ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ