ದೀಪಾವಳಿ ಪ್ರಯುಕ್ತ ಸಿಹಿ ವಿನಿಮಯ ಮಾಡಿಕೊಂಡ ಭಾರತ ಮತ್ತು ಪಾಕಿಸ್ತಾನ ಸೈನಿಕರು

ವಾಘಾ, ನ.7- ಗಡಿಯಲ್ಲಿ ಕದನ ವಿರಾಮ ಉಲ್ಲಂಘನೆ, ಒಳನುಸುಳುವಿಕೆ ಹೊರತಾಗಿಯೂ ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಈದ್ ಮಿಲಾದ್, ದೀಪಾವಳಿ ಮತ್ತಿತರ ರಾಷ್ಟ್ರೀಯ ಹಾಗೂ ಧಾರ್ಮಿಕ ಹಬ್ಬಗಳ ಸಂದರ್ಭಗಳಲ್ಲಿ ಭಾರತ ಹಾಗೂ ಪಾಕಿಸ್ತಾನ ಸೈನಿಕರು ಪ್ರತಿವರ್ಷ ಸಿಹಿ ವಿನಿಮಯ ಮಾಡಿಕೊಂಡು ಶುಭಾಶಯ ಕೋರಲಾಗುತ್ತದೆ.

ಇದಕ್ಕೂ ಮುನ್ನ ಭಾರತದ 72 ಸ್ವಾತಂತ್ರ್ಯೋತ್ಸವ ಹಾಗೂ ಈದ್ ಅಲ್-ಅದ್ಹಾ ಹಬ್ಬದ ಸಂದರ್ಭದಲ್ಲಿ ಉಭಯ ದೇಶಗಳ ಸೈನಿಕರು ಸಿಹಿ ವಿನಿಮಯ ಮಾಡಿಕೊಂಡಿದ್ದರು.

ಆದಾಗ್ಯೂ, ಗಡಿ ಭಾಗದಲ್ಲಿ ಕದನ ವಿರಾಮ ಉಲ್ಲಂಘನೆಯಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭದಲ್ಲಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದಿಲ್ಲ ಎನ್ನಲಾಗುತ್ತಿದೆ.

2016ರಲ್ಲಿ ಭಾರತೀಯ ವಾಯುನೆಲೆ ಉರಿ ಮೇಲಿನ ದಾಳಿ ಹಿನ್ನೆಲೆಯಲ್ಲಿ ಆ ವರ್ಷ ಸಂಪ್ರದಾಯಿಕ ಸಿಹಿ ವಿನಿಮಯ ಸ್ಥಗಿತಗೊಳಿಸಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ