ದುಬೈನಲ್ಲಿರುವ ನೀರವ್ ಮೋದಿ ಮತ್ತು ಕುಟುಂಬಕ್ಕೆ ಸೇರಿದ 58 ಕೋಟಿ ಆಸ್ತಿ ಮುಟ್ಟುಗೋಲು

ನವದೆಹಲಿ/ದುಬೈ, ನ.7- ಪಂಜಾಬ್ ನ್ಯಾಷನಲ್ ಬ್ಯಾಂಕ್‍ನಿಂದ ಬಹುಕೋಟಿ ರೂ. ಸಾಲ ಪಡೆದು ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ಪ್ರಮುಖ ಆರೋಪಿ ಮತ್ತು ವಜ್ರದ ವ್ಯಾಪಾರಿ ನೀರವ್ ಮೋದಿ ವಿರುದ್ಧ ಕಾರ್ಯಾಚರಣೆ ಮತ್ತಷ್ಟು ತೀವ್ರಗೊಂಡಿದೆ.

ದುಬೈನಲ್ಲಿರುವ ನೀರವ್ ಮತ್ತು ಕುಟುಂಬಕ್ಕೆ ಸೇರಿದ 58 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

ದುಬೈನ ವಿವಿಧೆಡೆ ನೀರವ್‍ಗೆ ಸೇರಿದ ಒಟ್ಟು 11 ಆಸ್ತಿ-ಪಾಸ್ತಿಗಳನ್ನು ಜಫ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ತಿಂಗಳು ಲಂಡನ್‍ನಲ್ಲಿರುವ ನೀರವ್ ಮೋದಿ ಆಸ್ತಿ-ಪಾಸ್ತಿಗಳನ್ನು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದರು. ಎರಡು ತಿಂಗಳ ಹಿಂದೆ ನ್ಯೂಯಾರ್ಕ್‍ನಲ್ಲಿರುವ 637 ಕೋಟಿ ರೂ.ಗಳ ಸ್ವತ್ತುಗಳನ್ನು ಸಹ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ