ನ.19ರಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ವಿಧಾನಸೌಧ ಮುತ್ತಿಗೆ

ಬೆಂಗಳೂರು, ನ.9- ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿ ಇದೇ 19ರಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಸಂಘದ ಗೌರವಧ್ಯಕ್ಷ ನಾಮರಸ ಮಾಲಿ ಪಾಟೀಲ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಕ್ಕೆ 10 ಸಾವಿರಕ್ಕೂ ಹೆಚ್ಚು ರೈತರು ನಗರದ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಹೊರಟು ವಿಧಾನಸೌಧದ ಮುಂಭಾಗ ಜಾಮವಣೆಗೊಂಡು ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಖ್ಯಮಂತ್ರಿ ಅವರು ರೈತರ ಸಾನವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ಘೋಷಿಸಿದ್ದು , ಆದರೆ ಇಲ್ಲಿಯವರೆಗೂ ಸಾಲ ಮನ್ನಾ ಆಗಿಲ್ಲ , ವಾಣಿಜ್ಯ ಬ್ಯಾಂಕಿನಲ್ಲಿರುವ ಸಾಲದ 2 ಲಕ್ಷ ರೂ. ಮನ್ನಾ ಮಾಡಿದ್ದು , ಈ ಬಗ್ಗೆ ಯಾವುದೇ ಬ್ಯಾಂಕಿಗೂ ಸುತ್ತೊಲೆ ಕಳುಹಿಸದ ರೈತರ ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಗೊಂದಲ ಸೃಷ್ಟಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಎಂ. ಮಂಜುನಾಥಗೌಡ, ಪ್ರಧಾನ ಕಾಯದರ್ಶಿ ಬಡಗಲಪುರ ನಾಗೇಂದ್ರ ಸೇರಿದಂತೆ ಮತ್ತಿತರರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ