
ಬೆಂಗಳೂರು, ನ.9- ನಾಳೆ ಟಿಪ್ಪು ಜಯಂತಿ ಆಚರಣೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿರುವ ಕಾರಣ ರಾಜ್ಯಾದ್ಯಂತ ಸೂಕ್ತ ಬಂದೋಬಸ್ತ್ ಮಾಡಲಾಗಿದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೆÇಲೀಸ್ ಮಹಾನಿರ್ದೇಶಕ ಕಮಲ್ಪಂಥ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಪೆÇಲೀಸರ ಜತೆಗೆ ಮೂರು ಕಂಪೆನಿ ಆರ್ಎಎಫ್ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹೇಳಿದರು.
ಮಡಿಕೇರಿ, ಚಿತ್ರದುರ್ಗ, ಬೆಂಗಳೂರು ನಗರ ಪ್ರದೇಶಗಳಲ್ಲಿ ತಲಾ ಒಂದೊಂದು ಆರ್ಎಎಫ್ ಕಂಪೆನಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಅವರು ಹೇಳಿದರು.
ಸೂಕ್ಷ್ಮ ಪ್ರದೇಶಗಳಿಗೆ ಕೆಎಸ್ಆರ್ಪಿ 107 ತುಕಡಿಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಆಯಾ ಜಿಲ್ಲೆಗಳಲ್ಲಿ ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಹಲವೆಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಕಮಲ್ಪಂಥ್ ಹೇಳಿದರು.
ಕೆಲವೆಡೆ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತೀವ್ರ ನಿಗಾ ವಹಿಸಲಿದ್ದಾರೆ ಎಂದು ಅವರು ಹೇಳಿದರು.