ನವದೆಹಲಿ: ಗಣರಾಜ್ಯೋತ್ಸವ ದಿನಾಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ನೀಡಿದ್ದ ಆಹ್ವಾನವನ್ನು ಅಮೇರಿಕ ಅಧ್ಯಕ್ಷ ನಿರಾಕಾರಿಸಿರುವ ಬೆನ್ನಲ್ಲೇ ಭಾರತ ಆಫ್ರಿಕಾ ನಾಯಕರನ್ನು ಆಹ್ವಾನಿಸಲು ಮುಂದಾಗಿದೆ.
ಈಗಾಗಲೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸುವ ವಿದೇಶಿ ಗಣ್ಯರ ಪಟ್ಟಿ ಸಿದ್ಧವಾಗುತ್ತಿದೆ. ಪ್ರಮುಖವಾಗಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಫೊಸಾ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸರ್ಕಾರ ತನ್ನ ಅಂತಿಮ ಪ್ರಕಟಣೆ ನೀಡಿಲ್ಲ. ಆಫ್ರಿಕಾದ ರಾಯಭಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಮಫೋಸಾ ಅವರ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ.
Republic day South Africa, President, Cyril Ramaphosa,