ಶ್ರೀನಗರ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಇಬ್ಬರು ಉಗ್ರರನ್ನು ಭಾರತೂಯ ಸೇನಾಪಡೆ ಸದೆಬಡಿದಿದೆ. ಮೃತ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಪುಲ್ವಾಮಾದ ಟೆಕ್ಕಿನ್ ಗ್ರಾಮದಲ್ಲಿ ಉಗ್ರರು ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಹೊಂದಿ ಅಡಗಿ ಕುಳಿತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸೇನಾಪಡೆ, ಶೋಧ ಕಾರ್ಯದಲ್ಲಿ ತೊದಗಿದೆ. ಈ ವೇಳೆ ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಸೇನಾ ಪಡೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ, ಆದರೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಮಂಗಳವಾರವಷ್ಟೇ ಹಿಜ್ಬುಲ್ ಮುಜಾಹಿದ್ದೀನ್ ನ ಇಬ್ಬರು ಉಗ್ರರನ್ನು ಶೋಪಿಯಾನ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿತ್ತು.
Jammu and Kashmir,Two terrorists killed,Pulwama encounter