ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಜಾಮೀನು ಪಡೆಯಲು ವಕೀಲರ ಸಿದ್ಧತೆ

ಬೆಂಗಳೂರು, ನ.11- ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ವಿಚಾರಣೆ ನಡೆಸಿ ಸಿಸಿಬಿ ಪೆÇಲೀಸರು ಬಂಧಿಸುತ್ತಿದ್ದಂತೆ ಅವರ ವಕೀಲರು ಜಾಮೀನು ಪಡೆಯಲು ಸಿದ್ಧತೆ ನಡೆಸಿದ್ದಾರೆ.

ಭಾನುವಾರ ನ್ಯಾಯಾಲಯದ ರಜಾದಿನವಾದ್ದರಿಂದ ಸಿಸಿಬಿ ಪೆÇಲೀಸರು, ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಕರೆದೊಯ್ದು ಅವರ ಎದುರು ಹಾಜರುಪಡಿಸಲಿದ್ದು, ಹೆಚ್ಚಿನ ವಿಚಾರಣೆಗೆ ತಮ್ಮ ವಶಕ್ಕೆ ನೀಡುವಂತೆ

ರೆಡ್ಡಿ ಪರ ವಕೀಲರು ಈಗಾಗಲೇ ಸಿಟಿ ಸಿವಿಲ್ ಕೋರ್ಟ್‍ನಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ನಾಳೆ ನಡೆಯಲಿದೆ. ರೆಡ್ಡಿ ಅವರನ್ನು ಬಂಧಿಸದಂತೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಅವರ ವಕೀಲರು ಶುಕ್ರವಾರವೇ ವಾಪಸ್ ಪಡೆದಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ