ಕೊನೆಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಬಂಧಿಸಿದ ಸಿಸಿಬಿ ಪೆÇಲೀಸರು

ಬೆಂಗಳೂರು, ನ.11-ಗೋಲ್ಡ್ ಡೀಲ್ ಪ್ರಕರಣದಲ್ಲಿ ಒಳಸಂಚು ರೂಪಿಸಿದ್ದಾರೆಂಬ ಆರೋಪದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರನ್ನು ಕೊನೆಗೂ ಸಿಸಿಬಿ ಪೆÇಲೀಸರು ಬಂಧಿಸಿದ್ದಾರೆ.
ನಿನ್ನೆ ಸಂಜೆಯಿಂದ ಸಿಸಿಬಿ ಕಚೇರಿಯಲ್ಲಿ ಸತತ ವಿಚಾರಣೆ ಎದುರಿಸುತ್ತಿದ್ದ ಗಾಲಿ ಜನಾರ್ದನ ರೆಡ್ಡಿ ಅವರನ್ನು ಇಂದು ಮಧ್ಯಾಹ್ನ ಬಂಧಿಸಲಾಗಿದ್ದು, ಅವರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಸಾಕ್ಷಿಗಳ ಹೇಳಿಕೆ ಮತ್ತು ಮಾಹಿತಿಯನ್ನು ಆಧರಿಸಿ ಜನಾರ್ದನ ರೆಡ್ಡಿ ಅವರನ್ನು ಬಂಧಿಸಲಾಗಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೆÇಲೀಸ್ ಆಯುಕ್ತ ಅಲೋಕ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
ರೆಡ್ಡಿ ಅವರನ್ನು ನ್ಯಾಯಾಧೀಶರ ಅವರ ಎದುರು ಹಾಜರುಪಡಿಸುತ್ತೇವೆ. ಪ್ರಕರಣ ಸಂಬಂಧ ಮತ್ತಷ್ಟು ಸಾಕ್ಷ್ಯ ಸಂಗ್ರಹಿಸುತ್ತೇವೆ. ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ವಶಪಡಿಸಿಕೊಂಡು ಹೂಡಿಕೆದಾರರಿಗೆ ಹಿಂದಿರುಗಿಸುತ್ತೇವೆ. ಜನಾರ್ದನ ರೆಡ್ಡಿ ಅವರ ಆಪ್ತ ಅಲಿಖಾನ್ ಅವರನ್ನು ಸಹ ಬಂಧಿಸಿದ್ದೇವೆ ಎಂದು ಅವರು ಹೇಳಿದರು.

ಡಿ.ಜೆ.ಹಳ್ಳಿ ಪೆÇಲೀಸ್ ಠಾಣೆಯಲ್ಲಿ ದಾಖಲಾಗಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಹಾಗೂ ಪ್ರತಿಷ್ಠಿತ ಹೋಟೆಲ್‍ನಲ್ಲಿ ನಡೆದಿದೆ ಎನ್ನಲಾದ ಮಾತುಕತೆಯ ಫೆÇೀಟೋದಲ್ಲಿರುವ ಕೆಲವು ವ್ಯಕ್ತಿಗಳನ್ನು ಸಿಸಿಬಿ ಕಚೇರಿಗೆ ಕರೆದು ವಿಚಾರಣೆ ನಡೆಸಲಾಗಿದ್ದು, ಎಲ್ಲಾ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ.
ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಉದ್ಯಮಿಯೊಬ್ಬರಿಂದ ಚಿನ್ನದ ಗಟ್ಟಿ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೆÇಲೀಸರು ನೀಡಿದ್ದ ನೋಟಿಸ್ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ನಾಲ್ಕು ಗಂಟೆಗೆ ಜನಾರ್ದನ ರೆಡ್ಡಿ ಸಿಸಿಬಿ ಪೆÇಲೀಸರ ಎದುರು ಹಾಜರಾಗಿದ್ದು, ತಡರಾತ್ರಿವರೆಗೂ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು.
ಇಂದು ಬೆಳಗ್ಗೆ ಕೂಡ ಸಿಸಿಬಿ ಪೆÇಲೀಸರು ಜನಾರ್ದನ ರೆಡ್ಡಿ ಅವರನ್ನು ತೀವ್ರ ವಿಚಾರಣೆ ನಡೆಸಿ, ನಂತರ ಬಂಧಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ