ಚತ್ತೀಸ್ ಗಢ ಮೊದಲಹಂತದಲ್ಲಿ ಶೆ.70ರಷ್ಟು ಮತದಾನ

ರಾಯ್ಪುರ: ಚತ್ತೀಸ್ ಗಢ ವಿಧಾನಸಭಾ ಚುನಾವಣೆಗೆ ಮೊದಲ ಹಂತದ ಮತದಾನ ನಡೆದಿದ್ದು, ಶೆ.70ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ದಾಖಲೆಯ ಪ್ರಮಾಣದ ಮತದಾನ ನಡೆದಿರುವುದು ಈ ಬಾರಿಯ ಚುನಾವಣೆಯ ವಿಶೇಷ. ದಾಂತೇವಾಡದಲ್ಲಿ ಶೇ.48 ರಷ್ಟು ಮತದಾನವಾಗಿದ್ದು, ನಕ್ಸಲ್ ಪೀಡಿತ ಪ್ರದೇಶವಾದ ಬಸ್ತಾರ್ ಜಿಲ್ಲೆಯಲ್ಲಿ ಶೇ.58 ರಷ್ಟು ಮತದಾನ ನಡೆದಿದೆ.

ಮೊದಲ ಹಂತದ ಚುನಾವಣೆಯಲ್ಲಿ ನಕ್ಸಲ್ ಪೀಡಿತ 8 ಜಿಲ್ಲೆಗಳ 18 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಡ್ರೋನ್ ಕ್ಯಾಮೆರಾ ನಿಯೋಜಿಸಿ, ನಕ್ಸಲರ ಚಲನವಲನಗಳ ಮೇಲೆ ಹದ್ದಿನ ಕಣ್ಣು ಇಡಲಾಗಿತ್ತು.

Chhattisgarh, Assembly poll

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ