ಬೆಂಗಳೂರು, ನ.12- ಕೇಂದ್ರ ಸಚಿವ ಅನಂತ ಕುಮಾರ್ ಬಿಜೆಪಿ ಪಕ್ಷದಲ್ಲಿದ್ದರೂ ನನಗೆ ಉತ್ತಮ ಸ್ನೇಹಿತರಾಗಿದ್ದರು. ಅವರ ಅಗಲಿಕೆ ವೈಯಕ್ತಿಯವಾಗಿ ದುಃಖ ತರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ನನಗೆ ಅತ್ಯಂತ ಆತ್ಮೀಯರು. ಆರು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ ಸಾಕಷ್ಟು ಜನ ಪರ ಕೆಲಸ ಮಾಡಿದ್ದಾರೆ. ಪP್ಷÁತೀತವಾಗಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರೊಬ್ಬ ಸಜ್ಜನ ರಾಜಕಾರಣಿ. ರಾಜಕೀಯ ಸಿದ್ಧಾಂತ ಬೇರೆಯೇ ಇದ್ದರೂ ಸಾರ್ವಜನಿಕ ಬದುಕಿನಲ್ಲಿ ಅವರು ಮಾದರಿಯಾದ್ದರು.
ಬಹುಶಃ ಅವರ ಆರೋಗ್ಯದ ಬಗ್ಗೆ ಮೊದಲೇ ತಿಳಿದಿದ್ದರೆ ಇಂಥ ಅನಾಹುತವಾಗುತ್ತಿರಲಿಲ್ಲ. ಇತ್ತಿಚೆಗೆ ವಾಜಪೇಯಿ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ನಾವಿಬ್ಬರು ಅಕ್ಕಪಕ್ಕ ಕುಳಿತಿದ್ದವು. ಆಗಲೂ ಅವರು ಆರೋಗ್ಯವಂತರಾಗಿಯೇ ಕಂಡರು. ಅವರ ಕೆಲಸವನ್ನು ಪP್ಷÁತೀತವಾಗಿ ಎಲ್ಲರೂ ಸ್ಮರಿಸುವಂಥದ್ದು. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.