ಬೆಂಗಳೂರು: ಕೇಂದ್ರ ಸಚಿವ ಅನಂತ ಕುಮಾರ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಎಚ್ಡಿ.ದೇವೇಗೌಡ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
ಅನಂತ ಕುಮಾರ್ ರವರು ನಾನು ಪ್ರಧಾನಿ ಆದ ಸಂದರ್ಭದಲ್ಲಿ ಮೊದಲ ಬಾರಿಗೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸದಸ್ಯರಾಗಿ ಆಯ್ಕೆಯಾಗಿ ಅಂದಿನಿಂದ ಇಂದಿನವರೆಗೂ ಸಮಾಜಕ್ಕೆ ಉತ್ತಮ ಸೇವೆಸಲ್ಲಿಸುತ್ತಿದ್ದರು. ನಾವೆಲ್ಲ ಒಬ್ಬ ಸೃಜನಶೀಲ ವ್ಯಕ್ತಿಯನ್ನು ಕಳೆದುಕೊಂಡಿದ್ದೀವಿ. ನನ್ನ ಮತ್ತು ಅವರ ಸಂಬಂಧ ಸುಮಾರು 3 ದಶಕಗಳದ್ದು. ನಾನು ಈ ದಿನ ನನ್ನ ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೀನಿ ವಯಕ್ತಿಕವಾಗಿ ಮನಸ್ಸಿಗೆ ಬಹಳ ನೋವುಂಟಾಗಿದೆ ಎಂದು ತಿಳಿಸಿದ್ದಾರೆ.
ಅವರ ಅಗಲಿಕೆಯಿಂದ ದೇಶಕ್ಕೆ ತುಂಬಲಾಗದ ನಷ್ಟವುಂಟಾಗಿದೆ. ಆ ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಭಗವಂತ ಅವರ ಕುಟುಂಬಕ್ಕೆ ಮತ್ತು ಅವರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಸಂತಾಪ ಸೂಚಿಸಿದ್ದಾರೆ
Union minister,Ananth Kumar, passes away ,H D Devegowda Condolences