ಕೇಂದ್ರ ಸಚಿವ ಅನಂತ ಕುಮಾರ್‍ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಂಪುಟದ ಗಣ್ಯರು ಭಾಗಿ ಸಾಧ್ಯತೆ

ಬೆಂಗಳೂರು, ನ.12- ಕ್ಯಾನ್ಸರ್ ರೋಗದಿಂದ ನಿಧನರಾದ ಅನಂತ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಗಣ್ಯಾತಿಗಣ್ಯರು ಭಾಗವಹಿಸಲಿದ್ದಾರೆ.

ವಿದೇಶ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರು ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ಆಗಮಿಸಿ ಅನಂತಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ನಾಳೆ ಬೆಳಿಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಅವರೊಂದಿಗೆ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ಜೆ.ಪಿ.ನಡ್ಡಾ, ಉಮಾ ಭಾರತಿ, ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ದೇವೇಂದ್ರ ಫಡ್ನವೀಸ್, ನಿತೀಶ್ ಕುಮಾರ್, ಶಿವರಾಜ್ ಸಿಂಗ್ ಚೌಹಾಣ್, ವಸುಂಧರಾ ರಾಜೇ, ಡಾ.ರಮಣ್ ಸಿಂಗ್, ರಘವಂಶ ಪ್ರಸಾದ್, ಮನೋಹರ್ ಲಾಲ್ ಕಟ್ಟರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಸೇರಿದಂತೆ ಮತ್ತಿತರ ಪ್ರಮುಖರು ಭಾಗವಹಿಸಲಿದ್ದಾರೆ.

ಪ್ರಧಾನಿಯವರು ಅನಂತ್ ಕುಮಾರ್ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳುತ್ತಿರುವ ಕಾರಣ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ