ಅನಂತ್‍ಕುಮಾರ್ ಅಗಲಿಕೆಗೆ ಆದಿಚುಂಚನಗಿರಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ

ಬೆಂಗಳೂರು, ನ.12- ಸರಳ, ಸಜ್ಜನ, ಸುಸಂಸ್ಕøತ ರಾಜಕಾರಣಿಯಾಗಿದ್ದ ಅನಂತ್‍ಕುಮಾರ್ ಅವರು ಉತ್ತಮ ಸಂಸದೀಯ ಪಟು ಎಂದು ಹೆಸರಾಗಿದ್ದರು ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ತಿಳಿಸಿದ್ದಾರೆ.

ಅನಂತ್‍ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಶ್ರೀಗಳು, ರಾಜ್ಯ ಹಾಗೂ ಕೇಂದ್ರದ ಸಮನ್ವಯತೆ ಕಾಯ್ದುಕೊಂಡು ಸದಾ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿದ್ದ ಇವರು, ತಾವು ನಂಬಿದ ತತ್ವಾದರ್ಶಗಳು, ಮೌಲ್ಯಗಳಿಗೆ ಚುತಿ ಬಾರದಂತೆ ಕಾರ್ಯ ನಿರ್ವಹಿಸುತ್ತಿದ್ದರು. ಆರು ಬಾರಿ ಲೋಕಸಭೆ ಸದಸ್ಯರಾಗಿ, ವಿಮಾನಯಾನ, ಪ್ರವಾಸೋದ್ಯಮ, ನಗರಾಭಿವೃದ್ಧಿ, ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಅವಿಸ್ಮರಣೀಯ.

ಅನಂತ್‍ಕುಮಾರ್ ಅವರು ಮಠದ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಶ್ರೀ ಮಠವು ಕೈಗೊಳ್ಳುವ ಲೋಕಸೇವಾ ಕೈಂಕರ್ಯಗಳಿಗೆ ತಮ್ಮ ಸಲಹೆ, ಸೂಚನೆಗಳನ್ನು ನೀಡುವುದರ ಜತೆಗೆ ಪೆÇ್ರೀ ನೀಡುತ್ತಿದ್ದರು.
ತಮ್ಮ ಅವಿಸ್ಮರಣೀಯ ಸೇವೆ ಮೂಲಕ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದ ಅನಂತ್‍ಕುಮಾರ್ ಅವರ ನಿಧನದಿಂದ ಇಡೀ ದೇಶಕ್ಕೆ ಭರಿಸಲಾಗದ ನಷ್ಟವಾಗಿದೆ. ಭಗವಂತ ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿ ವೃಂದಕ್ಕೆ ದುಃಖ ಸಹಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ