ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ಗುರುವಾರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮಳೆಯಾಗಲಿದೆ. ಭಾರೀ ಪ್ರಮಾಣದಲ್ಲಿ ಮಳೆಯಾಗುವುದಿಲ್ಲ. ಚಂಡಮಾರುತ ಯಾವ ಪ್ರದೇಶದ ಕಡೆ ಹೋಗುತ್ತದೆ ಎನ್ನುವ ಆಧಾರದ ಮೇಲೆ ಈ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಶ್ರೀನಿವಾಸ ರೆಡ್ಡಿ ತಿಳಿಸಿದರು.
ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ನವೆಂಬರ್ 15, 16 ರಂದು ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.