ಪೆಟ್ರೋಲ್-ಡೀಸೆಲ್ ದರದಲ್ಲಿ ಮತ್ತೆ ಇಳಿಕೆ

ನವದೆಹಲಿ: ತೈಲೋತ್ಪನ್ನಗಳ ದರ ಮತ್ತೆ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೂಡಕೊಂಚ ಪ್ರಮಾಣದಲ್ಲಿ ಇಳಿಕೆಯಾಗಿದೆ.

ಇಂದು ಪೆಟ್ರೋಲ್ ದರ 13 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 12 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.43ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 72.19ಕ್ಕೆ ಇಳಿಕೆಯಾಗಿದೆ.

ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 13ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 82.94 ರೂಗಳಿಗೆ ಇಳಿಕೆಯಾಗಿದೆ. ಡೀಸೆಲ್ ದರ ಕೂಡ 12 ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 75.64ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 78.46 ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 73.20 ರೂಗೆ ಇಳಿಕೆಯಾಗಿದೆ.

petrol,diesel,priced

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ