
ಬೆಂಗಳೂರು, ನ.14- ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ಬೆಳಗಾವಿಯಲ್ಲಿ ಡಿ.10ರಿಂದ 21ರವರೆಗೆ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಮಂಡಲದ ಉಭಯ ಸದನಗಳ ಅಧಿವೇಶನವನ್ನು ಬೆಳಗಾವಿಯ ಸುವರ್ಣಸೌಧದಲ್ಲಿ 10 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಸಿದ್ದತೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.