ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಡಿ.ಸಿ.ಎಂ

ತುಮಕೂರು, ನ.14-ಸಚಿವ ಸಂಪುಟ ವಿಸ್ತರಣೆ ಸದ್ಯದಲ್ಲೇ ಆಗಲಿದ್ದು, ಈಗಾಗಲೇ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಪಂಡಿತ್ ಜವಹರಲಾಲ್ ನೆಹರೂ ಅವರ ಜನ್ಮದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ದೀಪಾವಳಿ ನಂತರ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದ್ದೆವು. ಈ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದರು.

ಜನಾರ್ಧನರೆಡ್ಡಿ ವಿಷಯವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, ಈ ಪ್ರಕರಣ ನ್ಯಾಯಾಲಯದಲ್ಲಿದೆ. ಈ ಬಗ್ಗೆ ಏನೂ ಮಾತನಾಡುವುದಿಲ್ಲ. ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಾಕ್ಷ್ಯಾಧಾರಗಳನ್ನು ಒದಗಿಸುವಲ್ಲಿ ಎಲ್ಲಿ ಎಡವಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದೇವೆ ಎಂದರು.

ಕೊಡಗಿನಲ್ಲಿ ಪತ್ರಕರ್ತರೊಬ್ಬರನ್ನು ಬಂಧಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಟಿಪ್ಪು ಜಯಂತಿ ಸರ್ಕಾರದ ಕಾರ್ಯಕ್ರಮ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ನಡೆದರೆ ಪೆÇಲೀಸರು ಸುಮ್ಮನಿರಲು ಸಾಧ್ಯವೇ ಎಂದರು.

ಸರ್ಕಾರ ಎಂದೂ ಹಿಂದೂಗಳನ್ನು ಟಾರ್ಗೆಟ್ ಮಾಡಿಲ್ಲ. ಯಾರೇ ತಪ್ಪು ಮಾಡಿದರೂ ಅದು ತಪ್ಪೇ. ಆದರೆ ಕೆಲವರು ದುರುದ್ದೇಶಪೂರ್ವಕವಾಗಿ ಶಾಂತಿ ಕದಡಲು ಪ್ರಯತ್ನಿಸಿದರೆ ಸುಮ್ಮನಿರಲು ಸಾಧ್ಯವಿಲ್ಲ ಎಂದರು.

ಪತ್ರಕರ್ತರೊಬ್ಬರ ಬಂಧನ ಖಂಡಿಸಿ ಕೊಡಗಿನಲ್ಲಿಂದು ಬಂದ್‍ಗೆ ಕರೆ ನೀಡಿದ್ದು, ಈ ಬಗ್ಗೆ ಕಟ್ಟೆಚ್ಚರ ಹಾಗೂ ತೀವ್ರ ನಿಗಾ ವಹಿಸಲು ಪೆÇಲೀಸರಿಗೆ ಈಗಾಗಲೇ ಸೂಚನೆ ನೀಡಿದ್ದೇವೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
ಸಂಸದ ಮುದ್ದಹನುಮೇಗೌಡ, ಮಾಜಿ ಶಾಸಕರಾದ ರಫೀಕ್ ಅಹಮ್ಮದ್, ಶಫೀ ಅಹಮ್ಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಮಕೃಷ್ಣ, ಮಾಜಿ ಅಧ್ಯಕ್ಷ ಕೆಂಚಮಾರಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಜಿಲ್ಲಾಧ್ಯಕ್ಷ ಲಿಂಗರಾಜು, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ