ಬೆಂಗಳೂರು, ನ.14- ಆಡಳಿತಾತ್ಮಕ ದೃಷ್ಟಿಯಿಂದ ಕೆಎಎಸ್ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ 9 ಅಧಿಕಾರಿಗಳನ್ನು ಮುಂದಿನ ಆದೇಶದವರೆಗೆ ವರ್ಗಾವಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಪ್ರವೀಣ್ಕುಮಾರ್ ಬಿ.ಎಲ್. ಅವರನ್ನು ಬೆಂಗಳೂರಿನ ಕಂದಾಯ ಇಲಾಖೆ, ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ನಿರ್ದೇಶಕರನ್ನಾಗಿ ನೇಮಿಸಲಾಗಿದ್ದು, ಚಾಮರಾಜನಗರ ಅಪರ ಜಿಲ್ಲಾಧಿಕಾರಿ ಕೆ.ಎಂ.ಗಾಯತ್ರಿ ಅವರನ್ನು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ, ಬಳ್ಳಾರಿಯ ಅಪರ ಜಿಲ್ಲಾಧಿಕಾರಿ ಎಸ್.ಜಿ.ಸೋಮಶೇಖರ್ ಅವರನ್ನು ವಿಕಾಸಸೌಧದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಉಪಕಾರ್ಯದರ್ಶಿ (ಗಣಿ)ಯಾಗಿ, ಡಾ.ಷಣ್ಮುಖ ಅವರನ್ನು ಕಲಬುರಗಿಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಬಸವರಾಜು ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ, ಎನ್.ಮಹೇಶ್ಬಾಬು ಅವರನ್ನು ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಉಪ ಪ್ರಧಾನ ವ್ಯವಸ್ಥಾಪಕರ ಸ್ಥಾನಕ್ಕೆ ವರ್ಗಾವಣೆ ಮಾಡಿದ್ದು, ಭೂಮಿ ಉಸ್ತುವಾರಿ ಕೋಶದ ವಿಶೇಷ ಉಪ ಆಯುಕ್ತರಾಗಿದ್ದ ಕಾತ್ಯಾಯಿನಿದೇವಿ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಮುಖ್ಯ ಆಡಳಿತಾಧಿಕಾರಿಯಾಗಿ, ಕಲಬುರಗಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿದ್ದ ಸಾಜಿದ್ ಅಹಮ್ಮದ್ ಮುಲ್ಲಾ ಅವರನ್ನು ದಕ್ಷಿಣ ಕನ್ನಡ ಭಟ್ಕಳದ ಉಪವಿಭಾಗಾಧಿಕಾರಿಯಾಗಿ ಹಾಗೂ ಸಿ.ಎಸ್.ಶಿವಕುಮಾರ್ ಅವರನ್ನು ತುಮಕೂರು ಉಪವಿಭಾಗಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆಬೆಂಗಳೂರು, ನ.14- ಇನ್ನುಮುಂದೆ ನಗರದ ಪ್ರಮುಖ ಸ್ಥಳಗಳಲ್ಲಿ ಎರಡು ಪಾಳಿಗಳಲ್ಲಿ ಕಸ ವಿಲೇವಾರಿ ಮಾಡುವ ಪದ್ಧತಿ ಜಾರಿಗೆ ಬರಲಿದೆ.
ಸಮರ್ಪಕ ಘನತ್ಯಾಜ್ಯ ನಿರ್ವಹಣೆ ಉದ್ದೇಶದಿಂದ ಜನಸಂದಣಿ ಹೆಚ್ಚಿರುವ ಹಾಗೂ ವಾಣಿಜ್ಯ ಪ್ರದೇಶಗಳಲ್ಲಿ ಎರಡು ಪಾಳಿಗಳಲ್ಲಿ ಕಸ ವಿಲೇವಾರಿ ಮಾಡುವುದು ಹಾಗೂ ಬ್ಲಾಕ್ಸ್ಪಾಟ್ ತೆರವು ಕಾರ್ಯಾಚರಣೆ ನಡೆಯಲಿದೆ.
ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಟೆಂಡರ್ ಕರೆಯುವ ಸಂದರ್ಭದಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ಎರಡು ಪಾಳಿ (ಹಗಲು ಮತ್ತು ರಾತ್ರಿ)ಗಳಲ್ಲಿ ಕಸ ವಿಲೇವಾರಿ ಮಾಡಬೇಕು ಎಂದು ಷರತ್ತು ವಿಧಿಸಲು ಬಿಬಿಎಂಪಿ ಮುಂದಾಗಿದೆ.
ಪ್ರಸ್ತುತ ಬೆಳಗ್ಗೆ 6.30ರಿಂದ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಘನತ್ಯಾಜ್ಯ ವಿಲೇವಾರಿ ನಿರ್ವಹಣೆ ಮಾಡಲಾಗುತ್ತಿದೆ. ಹೀಗಾಗಿ ನಗರದಲ್ಲಿ ಕಸದ ಸಮಸ್ಯೆ ಉಲ್ಬಣಿಸಿದೆ.ಮಾತ್ರವಲ್ಲ, ರಸ್ತೆ ಬದಿಗಳಲ್ಲಿ ರಾಶಿ ರಾಶಿ ಕಸ ಬಿದ್ದು ಎಲ್ಲೆಡೆ ಬ್ಲಾಕ್ಸ್ಕ್ವಾಡ್ಗಳು ನಿರ್ಮಾಣಗೊಳ್ಳುತ್ತಿವೆ.
ನಗರದ ಕಸದ ಸಮಸ್ಯೆಗೆ ಮುಕ್ತಿ ಹಾಡುವ ಉದ್ದೇಶದಿಂದ ಹೊಸ ಟೆಂಡರ್ ಕರೆಯುವ ಸಂದರ್ಭದಲ್ಲಿ ಪ್ರಮುಖ ಸ್ಥಳಗಳಲ್ಲಿ ಹಗಲು ಮತ್ತು ರಾತ್ರಿ ಪಾಳಿಗಳಲ್ಲಿ ಕಸ ನಿರ್ವಹಣೆ ಮಾಡುವಂತೆ ಷರತ್ತು ವಿಧಿಸುವಂತೆ ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜ್ ಅವರು ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಪತ್ರ ಬರೆದಿದ್ದಾರೆ.
ಹೀಗಾಗಿ ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಟೆಂಡರ್ ಕರೆಯುವ ಸಂದರ್ಭದಲ್ಲಿ ಎರಡು ಪಾಳಿಗಳಲ್ಲಿ ಕಸ ವಿಲೇವಾರಿ ಮಾಡುವುದನ್ನು ಕಡ್ಡಾಯಗೊಳಿಸಲಾಗುತ್ತಿದೆ.