
ಬೆಂಗಳೂರು, ನ.15- ಅಪೆÇಲೋ ಆಸ್ಪತ್ರೆ ವತಿಯಿಂದ ತುರ್ತು ವೈದ್ಯಕೀಯ ಅಂತಾರಾಷ್ಟ್ರೀಯ ಸಮ್ಮೇಳನವನ್ನು ನಾಳೆಯಿಂದ ನ.18ರ ವರೆಗೆ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮ್ಮೇಳನದ ಅಧ್ಯಕ್ಷ ಹಾಗೂ ಅಪೆÇಲೋ ಆಸ್ಪತ್ರೆ ವೈದ್ಯಕೀಯ ಇಲಾಖೆ ಮುಖ್ಯಸ್ಥ ಡಾ.ಎ.ಎನ್.ವೆಂಕಟೇಶ್, ಈ ಸಮ್ಮೇಳನದಲ್ಲಿ ಭಾರತದ ಎಲ್ಲ ರಾಜ್ಯಗಳು ಹಾಗೂ ಅಮೆರಿಕ, ಇಂಗ್ಲೆಂಡ್, ಜಪಾನ್ ಸೇರಿದಂತೆ ಹಲವು ದೇಶಗಳ ಪ್ರಖ್ಯಾತ ವೈದ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುಮಾರು ಎರಡು ಸಾವಿರ ತಜ್ಞ ವೈದ್ಯರು ಸಮ್ಮೇಳನದಲ್ಲಿ ಭಾಗವಹಿಸಲು ಹೆಸರು ನೋಂದಾಯಿಸಿದ್ದಾರೆ ಎಂದರು.
ಸಮ್ಮೇಳನವನ್ನು ಕೇಂದ್ರ ಆರೋಗ್ಯ ಸಚಿವ ಅಶ್ವಿನ್ಕುಮಾರ್ ಚೌಬೆ ಮತ್ತು ರಾಜ್ಯ ಆರೋಗ್ಯ ಸಚಿವ ಶಿವಾನಂದ್ ಪಾಟೀಲ್ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.