ರೆಡ್ಡಿ ಬಂಧನಕ್ಕೆ ನಾನಾಗಲಿ, ಸಿಎಂ ಆಗಲಿ ಯಾವುದೇ ಪ್ರಚೋದನೆ ನೀಡಿಲ್ಲ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್

ಬೆಂಗಳೂರು, ನ.15-ರಾಜಕೀಯ ದೃಷ್ಟಿಯಿಂದ ಮಾಜಿ ಸಚಿವ ಜನಾರ್ದನರೆಡ್ಡಿ ಅವರನ್ನು ಬಂಧಿಸಿಲ್ಲ. ನಾನಾಗಲಿ, ಮುಖ್ಯಮಂತ್ರಿಯಾಗಲಿ ರೆಡ್ಡಿ ಬಂಧನಕ್ಕೆ ಯಾವುದೇ ಪ್ರಚೋದನೆ ನೀಡಿಲ್ಲ. ವಿಚಾರಣೆ ದೃಷ್ಟಿಯಿಂದ ಸಿಸಿಬಿ ಕಾನೂನಾತ್ಮಕವಾಗಿ ಕ್ರಮಕೈಗೊಂಡಿದೆ ಎಂದು ಗೃಹ ಸಚಿವರೂ ಆದ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆÇಲೀಸರ ತನಿಖೆಯಲ್ಲಿ ಜನಾರ್ದನರೆಡ್ಡಿ ಅವರ ಹೆಸರು ಕೇಳಿ ಬಂದಿದೆ. ಹೀಗಾಗಿ ಅವರನ್ನು ವಶಕ್ಕೆ ಪಡೆದು ಪೆÇಲೀಸರು ವಿಚಾರಣೆ ನಡೆಸಿದ್ದಾರೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ವಿಧಿಸಿತ್ತು.

ರಾಜ್ಯ ಸರ್ಕಾರದಿಂದ ಪೆÇಲೀಸ್ ಇಲಾಖೆಯನ್ನು ಯಾವುದೇ ರೀತಿ ದುರ್ಬಳಕೆ ಮಾಡಿಕೊಂಡಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಾನೂನು ತನ್ನ ಕೆಲಸವನ್ನು ಮಾಡಿದೆ. ನಾವು ಯಾವುದೇ ಹಸ್ತಕ್ಷೇಪ ಮಾಡಿಲ್ಲ. ರಾಜಕೀಯ ದೃಷ್ಟಿಯಿಂದ ರೆಡ್ಡಿ ಬಂಧನಕ್ಕೆ ಪ್ರಚೋದನೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಈ ವಿಷಯವನ್ನು ರೆಡ್ಡಿ ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ. ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ