ಜನಾರ್ದನರೆಡ್ಡಿ ಅವರಿಗೆ ತಮ್ಮ ನಾಲಿಗೆಯ ಮೇಲೆ ಹಿಡಿತ ವಿರಲಿ: ಜೆಡಿಎಸ್ ಬೆಂಗಳೂರು ಮಹಾನಗರ ಘಟಕ ಎಚ್ಚರಿಕೆ

ಬೆಂಗಳೂರು, ನ.15- ಮಾಜಿ ಸಚಿವ ಜನಾರ್ದನರೆಡ್ಡಿ ಜೈಲಿನಿಂದ ಹೊರ ಬಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅತ್ಯಂತ ಕೆಟ್ಟ ಪದಗಳನ್ನು ಬಳಸಿ ಮಾತನಾಡಿದ್ದಾರೆ. ಇದೇ ರೀತಿ ಅವರು ಮುಂದುವರೆಸಿದರೆ ತೀವ್ರ ಹೋರಾಟ ನಡೆಸಲಾಗುವುದು ಎಂದು ಜೆಡಿಎಸ್ ಬೆಂಗಳೂರು ಮಹಾನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್ ಎಚ್ಚರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಾರ್ದರೆಡ್ಡಿ ಅವರಿಗೆ ತಮ್ಮ ನಾಲಿಗೆಯ ಮೇಲೆ ಹಿಡಿತ ವಿರಲಿ. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸಲಾಗುವುದು. ಆಂಬಿಡೆಂಟ್ ಹಗರಣವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೇ ಬಯಲಿಗೆಳೆದಿದ್ದಾರೆ. ವಂಚನೆಗೊಳಗಾದ ನೂರಾರು ಮಂದಿ ಜೆಡಿಎಸ್ ಕಚೇರಿಗೆ ಬಂದು ಮನವಿ ಮಾಡಿದಾಗ ಗೌಡರು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪ್ರಕರಣವನ್ನು ತನಿಖೆ ನಡೆಸುವಂತೆ ಸೂಚಿಸಿದ್ದರು ಎಂದು ತಿಳಿಸಿದರು.
ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿ, ಜನಾರ್ದನರೆಡ್ಡಿ ಅವರು ಮುಖ್ಯಮಂತ್ರಿ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ರಾಜ್ಯದ ಆರೂವರೆ ಕೋಟಿ ಜನರಿಗೆ ಅವಮಾನ ಮಾಡಿದಂತಾಗಿದೆ. ಕೂಡಲೇ ಅವರು ಬಹಿರಂಗವಾಗಿ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ