ಮನೋಹರ ಪರಿಕ್ಕರ್ ಚೇತರಿಸಿಕೊಳ್ಳುತ್ತಿದ್ದಾರೆ: ಗೋವಾ ಸರ್ಕಾರ

ಪಣಜಿ: ಗೋವಾ ಸಿಎಂ ಆರೋಗ್ಯ ಸ್ಥಿರವಾಗಿದ್ದು ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೋವಾ ಸರ್ಕಾರ ಸ್ಪಷ್ಟ ಪಡಿಸಿದೆ.

ಪ್ಯಾಂಕ್ಯಿಯಾಟಿಕ್ ಸಮಸ್ಯೆಯಿಂದ ಬಳಲುತ್ತಿರುವ 62 ವರ್ಷದ ಮನೋಹರ್ ಪರಿಕ್ಕರ್ ಅವರು ಇತ್ತೀಚೆಗಷ್ಟೇ ದೆಹಲಿ ಏಮ್ಸ್ ಗೆ ದಾಖಲಾಗಿ ಮನೆಗೆ ವಾಪಸ್ ಆಗಿದ್ದರು. ಇದೀಗ ಪಣಜಿಯ ಮನೆಯಲ್ಲಿ ಇದ್ದುಕೊಂಡು ನುರಿತ ವೈದ್ಯರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಪರಿಕ್ಕರ್ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರಿಕ್ಕರ್ ಅವರ ಆರೋಗ್ಯ ಗಂಭೀರವಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಗೋವಾ ಸರ್ಕಾರ ಪರಿಕ್ಕರ್ ಆರೋಗ್ಯ ಸ್ಥಿತರವಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ. ಊಹಾಪೋಹಗಳಿಗೆ ಕಿವಿಗೊಡದಂತೆ ತಿಳಿಸಿದೆ.
Manohar Parrikar Is Stable, Social Media Posts,Rumours,Goa government

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ