ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸಲಿರುವ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ

ನವದೆಹಲಿ: ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎದು ತಿಳಿದುಬಂದಿದೆ.

ಕೇಂದ್ರ ಸರ್ಕಾರಿ ಮೂಲಗಳು ತಿಳಿಸಿರುವಂತೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಭಾರತ ಸರ್ಕಾರ ಮಾಡಿದ್ದ ಮನವಿಯನ್ನು ದಕ್ಷಿಣ ಆಫ್ರಿಕಾ ಆಧ್ಯಕ್ಷ ಸಿರಿಲ್ ರಮಫೊಸಾ ಅವರು ಸ್ವೀಕರಿಸಿದ್ದು, ಭಾರತಕ್ಕೆ ಆಗಮಿಸುವುದಾಗಿ ಭರವಸೆ ನೀಡಿದ್ದಾರೆ.

ನೆಲ್ಸನ್ ಮಂಡೇಲಾ ಅವರ ಆಪ್ತರಾಗಿರುವ ಸಿರಿಲ್ ರಮಫೊಸಾ ಅವರನ್ನು ಸ್ವತಃ ನೆಲ್ಸನ್ ಮಂಡೇಲಾ ಅವರು ಮುಂದಿನ ದಕ್ಷಿಣ ಆಫ್ರಿಕಾದ ಅಧ್ಯಕ್ಷೀಯ ಗಾದಿಗೆ ಶಿಫಾರಸ್ಸು ಮಾಡಿದ್ದರು. ಸಿರಿಲ್ ರಮಫೊಸಾ ಕೂಡ ಗಾಂಧಿವಾದಿಗಳಾಗಿದ್ದು, ಇದೇ ಕಾರಣಕ್ಕೆ ಭಾರತ ಸರ್ಕಾರ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಮನವಿ ಮಾಡಿತ್ತು ಎನ್ನಲಾಗಿದೆ.

ಸಿರಿಲ್ ರಮಫೊಸಾ ಅವರಿಗೂ ಮುನ್ನ ಭಾರತ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಆಹ್ವಾನ ನೀಡಿತ್ತು. ಆದರೆ ವೇಳಾಪಟ್ಟಿ ಗೊಂದಲದ ಹಿನ್ನಲೆಯಲ್ಲಿ ವೈಟ್ ಹೌಸ್ ಭಾರತದ ಮನವಿಯನ್ನು ತಿರಸ್ಕರಿಸಿತ್ತು.

Republic Day, chief guest,South African president Cyril Ramaphosa

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ