ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಗೆ ಅರ್ಜಿ ಆಹ್ವಾನ

ಬೆಂಗಳೂರು, ನ.17- ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಬೆಂಗಳೂರು ತರಬೇತಿ ಸಂಸ್ಥೆಯಲ್ಲಿ ನಡೆಯುವ ಡಿಪೆÇ್ಲಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳ ಸಹಕಾರ ಇಲಾಖೆ/ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುತ್ತಿರುವ ನೌಕರರು ಹಾಗೂ ಎಲ್ಲಾ ವಿವಿಧ ಸಹಕಾರ ಸಂಘ/ಬ್ಯಾಂಕ್‍ಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಉದ್ಯೋಗಿಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಮತ್ತು ಖಾಸಗಿ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

ತರಬೇತಿ ಪಡೆಯಲು ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 16 ವರ್ಷ ದಾಟಿದವರಾಗಿರಬೇಕು. ಅರ್ಜಿಯನ್ನು ನ.30ರೊಳಗೆ ಸಲ್ಲಿಸಬಹುದು. ತರಬೇತಿ ಪಡೆಯುವ ಎಲ್ಲ ಅಭ್ಯರ್ಥಿಗಳಿಗೆ ತಿಂಗಳಿಗೆ 400ರೂ. ಹಾಗೂ 30 ವರ್ಷದ ಒಳಗಿನ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿ ಅಭ್ಯರ್ಥಿಗಳಿಗೆ ಮಾಸಿಕ 500ರೂ. ಶಿಷ್ಯ ವೇತನ ನೀಡಲಾಗುವುದು.

ಕೆಐಸಿಎಂ, ನಂ.67, ಮೊದಲನೆ ಮಹಡಿ, ಆರ್‍ಐಸಿಎಂ ಆವರಣ, ಪದ್ಮನಾಭನಗರ, ದೇವೇಗೌಡ ಪೆಟ್ರೋಲ್ ಬಂಕ್ ಹತ್ತಿರ, ಬನಶಂಕರಿ 2ನೆ ಹಂತ, ಬೆಂಗಳೂರು-70 ಇಲ್ಲಿ ಅರ್ಜಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ 080-26692046, 9964002461/ 911080452 ಸಂಪರ್ಕಿಸಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ