ಜಮ್ಮು-ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು, ಇಬ್ಬರು ಉಗ್ರರನ್ನು ಸದೆಬಡಿದಿದೆ.

ಶೋಪಿಯಾನ್ ಜಿಲ್ಲೆಯ ರೆಬೋನ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿಗಳನ್ನು ಪಡೆದ ಭದ್ರತಾ ಪಡೆ, ಭಾರೀ ಕಾರ್ಯಾಚರಣೆಗಿಳಿದಿದ್ದವು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಕೂಡಲೇ ಎನ್’ಕೌಂಟರ್ ನಡೆಸಲು ಆರಂಭಿಸಿದ ಸೇನೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ.

ಕಾರ್ಯಾಚರಣೆ ಸ್ಥಳದತ್ತ ಸುಳಿಯದಂತೆ ನಾಗರೀಕರಿಗೆ ಸೂಚನೆ ನೀಡಲಾಗಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಸ್ಥಳದಲ್ಲಿ ಸ್ಫೋಟಕ ವಸ್ತುಗಳಿರುವ ಶಂಕೆಗಳಿವೆ ಎಂದು ಪೊಲೀಸರು ಹೇಳಿದ್ದಾರೆ.

Jammu And Kashmir, indian army,terrorist killed

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ