ಅಮೃತಸರದ ನಿರಂಕಾರಿ ಭವನದಲ್ಲಿ ಬಾಂಬ್ ಸ್ಫೋಟ: ಮೂವರು ಸಾವು

ಅಮೃತಸರ: ಪಂಜಾಬ್ ನ ಅಮೃತಸರದಲ್ಲಿ ಪ್ರಬಲ ಬಾಂಬ್ ಸ್ಫೋಟ ನಡೆದಿದ್ದು, ಘಟನೆಯಲ್ಲಿ ಮೂವರು ನಾಗರಿಕರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ.

ಅಮೃತಸರದ ರಾಜಸನ್ಸಿ ಗ್ರಾಮದ ನಿರಂಕಾರಿ ಭವನ ಧಾರ್ಮಿಕ ಸ್ಥಳದಲ್ಲಿ ಬಾಂಬ್ ಸ್ಪೋಟ ನಡೆಸಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆಯೇ ಈ ಕೃತ್ಯ ನಡೆದಿದ್ದು, ಕೃತ್ಯದ ಹಿಂದೆ ಉಗ್ರರ ಕೈವಾಡವಿದೆ ಎಂದು ಶಂಕಿಸಲಾಗಿದೆ. ಇನ್ನು ನಿರಂಕಾರಿ ಭವನದ ಸುತ್ತಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.

ಘಟನೆ ಕುರಿತು ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿ ಪ್ರಕಾರ ದ್ವಿಚಕ್ರ ವಾಹನದಲ್ಲಿ ಬಂದ ಮುಸುಕುಧಾರಿ ಮೂವರು ವ್ಯಕ್ತಿಗಳು ಮಂದಿರದ ಮೇಲೆ ಗ್ರೆನೇಡ್ ದಾಳಿ ನಡೆಸಿ, ಸ್ಥಳದಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿಸಿದ್ದಾರೆ.

Amritsar ,Bomb blast,Nirankari Bhawan,3 died

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ