ಬೆಂಗಳೂರು,ನ.18- ಕೆಪಿಸಿಸಿ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಿ ಅನುಭವವುಳ್ಳ ಡಾ.ಪುಷ್ಪ ಅಮರನಾಥ್ ಅವರನ್ನು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.
ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ನೂತನ ಅಧ್ಯಕ್ಷರಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷರಾಗಿ ಡಾ.ಪುಷ್ಪಾ ಅವರು ನಾಳೆ(19) ಬೆಳಗ್ಗೆ 11 ಗಂಟೆಗೆ ತಮ್ಮ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿಗಳು, ಸಂಸದರು, ಸಚಿವರು, ಶಾಸಕರು, ಹಿರಿಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ.