ನಮ್ಮ ಮೈತ್ರಿ ಸರಕಾರದ ಬಗ್ಗೆ ಹಗುರವಾಗಿ ಮಾತನಾಡುವ ನೈತಿಕತೆ ಬಿಜೆಪಿ ಪಕ್ಷಕ್ಕಿಲ್ಲ. ನಮ್ಮ ಸರಕಾರ 49 ಸಾವಿರ ಕೋಟಿ ರು. ರೈತರ ಸಾಲಮನ್ನಾ ಮಾಡುತ್ತಿದೆ. ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕಿದರು. ಇವರ ಪಕ್ಷಕ್ಕೆ ರೈತ ಬಗ್ಗೆ ಮಾತನಾಡುವ ಅಧಿಕಾರವಿಲ್ಲ. ಸಿಎಂ ಕುಮಾರಸ್ವಾಮಿ ಅವರು ರೈತರ ಬಗ್ಗೆ ಹಗುರವಾಗಿ ಮಾತನಾಡಲು ಸಾಧ್ಯವಿಲ್ಲ ಎಂದು ಉಒಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಹಣ ಪಾವತಿ ವಿಚಾರವಾಗಿ ಸಿಎಂ ಅವರು ನಾಳೆ ರೈತರ ಸಭೆ ಕರೆದಿದ್ದಾರೆ. ಈ ವೇಳೆ ಹಣಪಾವತಿಸದ ಸಕ್ಕರೆ ಕಾರ್ಖಾನೆ್ಳಗಳ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ಇಂದು ರೈತರ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾನೂನು ಚೌಕಟ್ಟಿನಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ ಎಂದರು.
ಆ್ಯಂಬಿಟೆಂಡ್ ಪ್ರಕರಣ ತನಿಖೆ ಹಂತದಲ್ಲಿದೆ. ಆರೋಪಿಗಳ ಪಟ್ಟಿ ಹೆಚ್ಚುತ್ತಿರುವುದರಿಂದ ತನಿಖೆ ಮುಗಿಯುವವರೆಗೂ ಏನೂ ಹೇಳಲು ಸಾಧ್ಯವಿಲ್ಲ. ಈ ಪ್ರಕರಣವನ್ನು ಸಿಸಿಬಿ ಪೊಲೀಸರು ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಸಿಐಡಿಗೆ ವಹಿಸುವ ಸಂದರ್ಭ ಬಂದಾಗ ನೋಡೋಣ ಎಂದು ಪ್ರತಿಕ್ರಿಯಿಸಿದರು.
DCM,G parameshwar,Farmers protest