ಶಬರಿಮಲೆ: ಶಬರಿಮಲೆಗೆ ಆಗಮಿಸಿದ್ದ 70ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.
ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ ಶಬರಿಮಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಹೇರಿದ್ದು, ರಾತ್ರಿ ವೇಳೆ ಸನ್ನಿಧಾನದಲ್ಲಿ ಯಾರೂ ತಂಗುವಂತಿಲ್ಲ ಎಂದು ಆದೇಶಿಸಿ, 70ಕ್ಕೂ ಹೆಚ್ಚು ಭಕ್ತರನ್ನು ಬಂಧಿಸಲಾಗಿತ್ತು. ಪೊಲೀಸರ ಈ ನಡೆಯನ್ನು ವಿರೋಧಿಸಿ ಬಿಜೆಪಿ, ಆರ್ ಎಸ್ ಎಸ್ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ತಿರುವನಂತಪುರದಲ್ಲಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮನೆ ಮುಂದೆ ನೆರೆದ ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ನಿವಾಸದ ಪ್ರಾಂಗಣದಲ್ಲಿ ಸೇರಿರುವ ನೂರಾರು ಪ್ರತಿಭಟನಾಕಾರರೊಂದಿಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ನಡುವೆ ಕೊಚ್ಚಿ, ಅರಾನ್ಮುಲ, ಕೊಲ್ಲಂ, ಮಲಪುರಂ, ಇಡುಕ್ಕಿ, ಕೋಯಿಕೋಡ್ನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.
BJP, RSS protest ,outside Kerala CM’s house, against detention of Sabarimala devotees