ಶಬರಿಮಲೆ ಅಯ್ಯಪ್ಪ ದೇವಾಲಯ ವಿವಾದ: ಕೇರಳದಲ್ಲಿ ತೀವ್ರಗೊಂಡ ಪ್ರತಿಭಟನೆ: ಸಿಎಂ ಮನೆಗೆ ಮುತ್ತಿಗೆ ಹಾಕಿ ಆಕ್ರೋಶ

ಶಬರಿಮಲೆ: ಶಬರಿಮಲೆಗೆ ಆಗಮಿಸಿದ್ದ 70ಕ್ಕೂ ಹೆಚ್ಚು ಭಕ್ತರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನಲೆಯಲ್ಲಿ ಕೇರಳದಾದ್ಯಂತ ಪ್ರತಿಭಟನೆಗಳು ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ಹಿಂದಿನ ಹಿಂಸಾತ್ಮಕ ಘಟನೆಗಳನ್ನು ಆಧರಿಸಿ ಶಬರಿಮಲೆಯಲ್ಲಿ ಪೊಲೀಸರು ನಿಷೇಧಾಜ್ಞೆ ಹೇರಿದ್ದು, ರಾತ್ರಿ ವೇಳೆ ಸನ್ನಿಧಾನದಲ್ಲಿ ಯಾರೂ ತಂಗುವಂತಿಲ್ಲ ಎಂದು ಆದೇಶಿಸಿ, 70ಕ್ಕೂ ಹೆಚ್ಚು ಭಕ್ತರನ್ನು ಬಂಧಿಸಲಾಗಿತ್ತು. ಪೊಲೀಸರ ಈ ನಡೆಯನ್ನು ವಿರೋಧಿಸಿ ಬಿಜೆಪಿ, ಆರ್ ಎಸ್ ಎಸ್ ಹಾಗೂ ವಿವಿಧ ಹಿಂದೂಪರ ಸಂಘಟನೆಗಳು ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.

ತಿರುವನಂತಪುರದಲ್ಲಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಮನೆ ಮುಂದೆ ನೆರೆದ ಬಿಜೆಪಿ, ಆರ್ ಎಸ್ ಎಸ್ ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ನಿವಾಸದ ಪ್ರಾಂಗಣದಲ್ಲಿ ಸೇರಿರುವ ನೂರಾರು ಪ್ರತಿಭಟನಾಕಾರರೊಂದಿಗೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ನಡುವೆ ಕೊಚ್ಚಿ, ಅರಾನ್ಮುಲ, ಕೊಲ್ಲಂ, ಮಲಪುರಂ, ಇಡುಕ್ಕಿ, ಕೋಯಿಕೋಡ್​ನಲ್ಲಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

BJP, RSS protest ,outside Kerala CM’s house, against detention of Sabarimala devotees

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ