ಬೆಂಗಳೂರು, ನ.19- ಒಪ್ಪಂದದ ಪ್ರಕಾರ ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ನೀಡಬೇಕು ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಒತ್ತಾಯಿಸಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸಲು ಸರ್ಕಾರ ಮಧ್ಯಪ್ರವೇಶಿಸಬೇಕು. ಬೆಳಗಾವಿ ಮತ್ತು ಬಾಗಲಕೋಟೆಯಲ್ಲಿ ಹೆಚ್ಚಾಗಿ ಸಕ್ಕರೆ ಕಾರ್ಖಾನೆಗಳಿವೆ. ಹೆಚ್ಚಿನ ಕಾರ್ಖಾನೆಗಳ ಮಾಲೀಕರು ರಾಜಕಾರಣಿಗಳೇ ಆಗಿದ್ದಾರೆ. ಅವರು ಈ ಬಗ್ಗೆ ಆಸಕ್ತಿ ವಹಿಸಿ ರೈತರ ಬಾಕಿ ನೀಡಿದರೆ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ . ಕನಿಷ್ಠ ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿ ಮಾಡಬೇಕು ಎಂದು ಅವರು ಹೇಳಿದರು.