ಮುಖ್ಯಮಂತ್ರಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರಾದು; ಸಚಿವ ಯು.ಟಿ.ಖಾದರ್

ಬೆಂಗಳೂರು, ನ.19- ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾರೊಬ್ಬರನ್ನೂ ನೋಯಿಸುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಬಾರಾದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಇಂದಿಲ್ಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಅವರು ಯಾರೊಬ್ಬರನ್ನು ನೋಯಿಸಲು ಈ ರೀತಿ ಮಾತನಾಡಿಲ್ಲ. ಕಬ್ಬಿನ ಬಾಕಿ ಹಣವನ್ನು ಪಾವತಿಸುವ ಬಗ್ಗೆ ನಿರ್ಲಕ್ಷ್ಯ ತಾಳಿಲ್ಲ. ರೈತರ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಅದನ್ನು ತಪ್ಪಾಗಿ ಅರ್ಥೈಸಬಾರದು ಹಾಗೂ ಜನರು ಅಪಾರ್ಥ ಮಾಡಿಕೊಳ್ಳಬಾರದು ಎಂದರು.

ಪ್ರಸ್ತುತ ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿರುವವರು ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಆದರೆ, ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿಯವರು ಸಾಲ ಮನ್ನಾ ಮಾಡುವ ಮೂಲಕ ರೈತರ ನೆರವಿಗೆ ದಾವಿಸಿದ್ದಾರೆ. ಅವರ ಬಗ್ಗೆ ಕಾಳಜಿಯನ್ನೂ ಹೊಂದಿದ್ದಾರೆ. ಇಂತಹವರ ಬಗ್ಗೆ ಅಪಾರ್ಥ ಮಾಡಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ