ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಮೊದಲ ತೀರ್ಪು ಪ್ರಕಟಿಸಿದ್ದು, ಇಬ್ಬರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದೆ.
ಸಿಖ್ ದಂಗೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸದಂತೆ ಯಶಪಾಲ್ ಸಿಂಗ್ ಗೆ ಗಲ್ಲು ಶಿಕ್ಷೆ ಹಾಗೂ ನರೇಶ್ ಶೇರಾವತ್ಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಯಶಪಾಲ್ ಸಿಂಗ್ ಹಾಗೂ ನರೇಶ್ ಶೇರಾವತ್ ದೆಹಲಿಯ ಮಹಿಪಾಲಪುರದಲ್ಲಿ ಇಬ್ಬರು ಸಿಖ್ ಯುವಕರ ಮೇಲೆ ಹಲ್ಲೆ ನಡೆಸಿದ್ದರು. ನಂತರ ನವೆಂಬರ್ 1, 1984ರಂದು ಇಬ್ಬರೂ ಮೃತಪಟ್ಟಿದ್ದರು. ಹರದೇವ್ ಸಿಂಗ್ ಹಾಗೂ ಅವತಾರ್ ಸಿಂಗ್ ಮೃತ ದುರ್ದೈವಿಗಳಾಗಿದ್ದರು.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಜಯ್ ಪಾಂಡೆ ಅವರು ಓರ್ವ ಅಪರಾಧಿಗೆ ಗಲ್ಲು ಶಿಕ್ಷೆ ಹಾಗೂ ಮತ್ತೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
1984 anti-Sikh riots, Delhi court,