ಹಲ್ಲೆ ಮತ್ತು ಜಾತಿನಿಂದನೆ ಮಾಡಿರುವ ಪಿಎಸ್ಐ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹ

ಬೆಂಗಳೂರು, ನ.20- ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿದ ಆರೋಪಿ ಮೇಲೆ ಹಲ್ಲೆ ನಡೆಸಿ ಜಾತಿನಿಂದನೆ ಮಾಡಿರುವ ಕೆಜಿಎಫ್‍ನ ಬೇತಮಂಗಲ ಪೆÇಲೀಸ್ ಠಾಣೆ ಪಿಎಸ್‍ಐ ಹೊನ್ನೇಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಜಾತಿನಿಂದನೆ ದೂರು ದಾಖಲಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಸಿ.ಎಸ್.ರಘು ಆಗ್ರಹಿಸಿದ್ದಾರೆ.

ನಗರದ ಪುಟ್ಟಣ್ಣಚೆಟ್ಟಿ ಪುರಭವನದ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಜ್ಯಸರ್ಕಾರ ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ.ಪಿಎಸ್‍ಐ ಹೊನ್ನೇಗೌಡ ಆರೋಪಿಗೆ ಬೂಟುಕಾಲಿನಿಂದ ಒದ್ದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವುದಲ್ಲದೆ ಜಾತಿನಿಂದನೆ ಮಾಡಿದ್ದಾರೆ. ಇಂತಹ ಅಧಿಕಾರಿ ಹಾಗೂ ಈ ಕೃತ್ಯಕ್ಕೆ ಬೆಂಬಲಿಸಿದ ಸಹಚರ ಪೆÇಲೀಸರನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಪರಿಶಿಷ್ಟ ಜಾತಿ/ಪಂಗಡ ದೌರ್ಜನ್ಯ ತಡೆ ಅಧಿನಿಯಮದಡಿ ಜಾತಿನಿಂದನೆಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಪ್ರತಿಭಟನೆ ವೇಳೆ ಬೇತಮಂಗಲ ಪಿಎಸ್‍ಐ ಹೊನ್ನೇಗೌಡ ಅವರ ಅಣಕು ಶವಯಾತ್ರೆ ನಡೆಸಿದ ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ದಲಿತರಿಗೆ ರಕ್ಷಣೆ ನೀಡಬೇಕು. ಪಿಎಸ್‍ಐ ಅವರನ್ನು ವಜಾಗೊಳಿಸಬೇಕು.ನ್ಯಾಯ ಕೊಡಿ ಎಂದು ಆಗ್ರಹಿಸಲಾಯಿತು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ