
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ಮುಂದುವರೆದಿರುವ ನಡುವೆಯೇ ಭದ್ರತಾಪಡೆಗಳು ಉಗ್ರರ ವಿರುದ್ಧದ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇಂದು ಮುಂಜಾನೆ ಶೋಫಿಯಾನ್ ಜಿಲ್ಲೆಯಲ್ಲಿ ನಡೆದ ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರನ್ನು ಸದೆಬಡಿಯಲಾಗಿದೆ.
ಮತ್ತು ಉಗ್ರರ ನಡುವೆ ಇಂದು ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಎನ್ಕೌಂಟರ್ಗೆ ಬಲಿಯಾಗಿದ್ದಾರೆ.
ಶೋಫಿಯಾನ ಜಿಲ್ಲೆಯ ನಾಡಿಗಾಮ್ ಗ್ರಾಮವೊಂದರಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿದ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆದಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ. ಉಗ್ರರು ನಡೆಸಿದ ಗುಂಡಿನ ದಾಳಿಯಲ್ಲಿ ಪ್ಯಾರಾಮಿಲಿಟರಿ ಪಡೆಯ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ.
ಉಗ್ರರು ಮತ್ತು ಸೇನಾಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರಿಗೆ ಗಾಯಗಳಾಗಿದ್ದು, ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
jammu-kashmir,Shopian,Encounter,4 Terrorists Shot Dead