
ಬೆಂಗಳೂರು,ನ.21-ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಸೋಮಶೇಖರ್ ಅವರ ತಾಯಿ ಸಣ್ಣಮ್ಮ ಹಾಗೂ ಹಿರಿಯ ರಾಜಕಾರಣಿ ಪಿ.ಎಂ.ನಾಡಗೌಡ ಅವರ ಪತ್ನಿ ಕಾಶಿಬಾಯಿ ನಾಡಗೌಡ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.
ಪ್ರತಿಭಾನ್ವಿತ ರಾಜಕಾರಣಿ ಸೋಮಶೇಖರ್ ಅವರನ್ನು ನಾಡಿಗೆ ಕೊಡುಗೆಯಾಗಿ ನೀಡಿದ ಸಣ್ಣಮ್ಮನವರದು ತ್ಯಾಗಮಯ ಜೀವನ ಎಂದರೆ ಉತ್ಪ್ರೇಕ್ಷೆಯಾಗಲಾರದು. ಉತ್ತಮ ಸಚಿವರಾಗಿ ಸೇವೆ ಮಾಡುವಂತೆ ಅವರನ್ನು ಬೆಳೆಸಿ ಸಮಾಜದ ಒಳಿತಿಗಾಗಿ ಶ್ರಮಿಸಿದ ಸಣ್ಣಮ್ಮ ಅವರ ನಿಧನದ ಸುದ್ದಿ ತಿಳಿದು ದುಃಖವಾಗಿದೆ.
ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.