
ಬೆಂಗಳೂರು, ನ.21-ವಿಧಾನಸಭಾ ಉಪಚುನಾವಣೆ ವೇಳೆ ಜಮಖಂಡಿ ಕ್ಷೇತ್ರದಲ್ಲಿ ಕಾನೂನು ಉಲ್ಲಂಘನೆ ಮಾಡಲಾಗಿದೆ ಎಂದು ಪಕ್ಷೇತರ ಅಭ್ಯರ್ಥಿ ರವಿ ಶಿವಪ್ಪ ಪಡಸಲಗಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಈ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ಆದರೂ ಮತ ಎಣಿಕೆ ಕೇಂದ್ರದಲ್ಲಿ ತಮಜಗೆ ಮತ ಎಣಿಕೆ ಕೊಠಡಿಗೆ ಹೋಗಲು ಅವಕಾಶ ಮಾಡಿಕೊಡಲಿಲ್ಲ. ಇಲ್ಲಿ ಇವಿಎಂ ಬದಲಾವಣೆಯಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಅಭ್ಯರ್ಥಿ 2 ಗಂಟೆಗಳ ಕಾಲ ಮೊಬೈಲ್ ಬಳಕೆ ಮಾಡಿದ್ದಾರೆ. ನನಗೆ ಬರಬೇಕಾದ 60 ಸಾವಿರ ಮತಗಳು ಬೇರೆಯವರಿಗೆ ಹೋಗಿದೆ. ಇವಿಎಂ ಬದಲಾವಣೆ ಆದ ಕಾರಣ ನಾನು ಚುನಾವಣೆಯಲ್ಲಿ ಸೋತಿದ್ದೇನೆ. ಇಲ್ಲಿ ಕಾನೂನು ಉಲ್ಲಂಘನೆಯಾಗಿದೆ ಎಂದು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಹಾಗೂ ರಾಜ್ಯಪಾಲರಿಗೆ ಪತ್ರ ಮೂಲಕ ತಿಳಿಸಿದ್ದೇನೆ. ಆದ್ದರಿಂದ ಸಮಗ್ರ ತನಿಖೆ ನಡೆಸಿ ಕಾನೂನು ಉಲ್ಲಂಘನೆ ಮಾಡಿದವರ ಮೇಲೆ ಕ್ರಮಕೈಗೊಂಡು ಮರು ಚುನಾವಣೆ ನಡೆಸಬೇಕೆಂದು ಒತ್ತಾಯಿಸಿದರು.
ಎಲೆಕ್ಷನ್ನ ಹಾಲ್ನಲ್ಲಿ ಎಲ್ಲಾ ರೀತಿಯ ಕಾನೂನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದರು.