ಬೆಂಗಳೂರು, ನ.22- ಶಾಲೆ ಕೊಠಡಿಯಲ್ಲೇ ಶಿಕ್ಷಕಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಂಗಮ್ಮನಗುಡಿ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚೆನ್ನೈ ಮೂಲದ ಸುಮತಿ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ.
ಕಮ್ಮಗೊಂಡನಹಳ್ಳಿಯ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಿಯಾಗಿ ಸೇವೆ ಸಲ್ಲಿಸುತ್ತಿದ್ದ ಸುಮತಿ ಅವರು ಕಮ್ಮಗೊಂಡನಹಳ್ಳಿಯಲ್ಲೇ ಮನೆ ಮಾಡಿಕೊಂಡು ವಾಸವಾಗಿದ್ದರು.
ನ.20ರಂದು ಶಾಲೆಗೆ ಬಂದಿದ್ದ ಸುಮತಿ ಅವರು ಶಾಲಾ ಅವಧಿ ಮುಗಿದ ನಂತರ ತನಗೆ ಕೆಲಸವಿದೆ ಎಂದು ಮೊದಲ ಮಹಡಿಯ ಕೊಠಡಿಯೊಂದರಲ್ಲಿ ಉಳಿದುಕೊಂಡಿದ್ದರು.
ಈ ನಡುವೆ ಸುಮತಿ ಅವರು ಕೊಠಡಿಯಲ್ಲಿದ್ದ ಫ್ಯಾನ್ಗೆ ವೇಲ್ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ನಿನ್ನೆ ಈದ್ ಮಿಲಾದ್ ನಿಮಿತ್ತ ಶಾಲೆಗೆ ರಜೆ ಘೋಷಿಸಲಾಗಿತ್ತು.
ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಬಂದಾಗಲೇ ಸುಮತಿ ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಎರಡು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸುದ್ದಿ ತಿಳಿದ ಗಂಗಮ್ಮನಗುಡಿ ಠಾಣೆ ಪೆÇಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ