ಮುಂಬರುವ ಲೋಕಸಭಾ ಚುನಾವಣೆ ಜತೆಗೇ ಕಾಶ್ಮೀರ ವಿಧಾನಸಭೆಗೂ ಚುನಾವಣೆಯಾಗಬೇಕು: ಬಿಜೆಪಿ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿದ್ದು, ಲೋಕಸಭಾ ಚುನಾವಣೆಯೊಂದಿಗೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ಪಿಡಿಪಿ ಮುಖ್ಯಸ್ಥೆ ಮಹಬೂಬ ಮುಫ್ತಿ ಅವರು ಬುಧವಾರ ರಾಜ್ಯಪಾಲರಿಗೆ ಪತ್ರ ಬರೆದು ಎನ್‌ಸಿ ಮತ್ತು ಕಾಂಗ್ರೆಸ್‌ ಜತೆ ಸೇರಿಕೊಂಡು ತನ್ನ ಪಿಡಿಪಿ ಸರಕಾರ ರಚಿಸುವುದಾಗಿ ತಿಳಿಸಿದ್ದರು. ಇದರಿಂದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ತಕ್ಷಣ ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಿದ್ದರು. ಇದರ ಬೆನ್ನಲ್ಲೇ ಈಗ ಬಿಜೆಪಿ ಲೋಕಸಭಾ ಚುನಾವಣೆ ಜತೆಯೇ ಜಮ್ಮು-ಕಾಶ್ಮೀರ ವಿಧಾನಸಭೆಗೂ ಚುನಾವಣೆ ನಡೆಯಬೇಕು ಎಂದಿದೆ.

ಈ ಕುರಿತು ಮಾತನಾಡಿರುವ ಜಮ್ಮು ಮತ್ತು ಕಾಶ್ಮೀರ ಬಿಜೆಪಿ ಅಧ್ಯಕ್ಷ ರವೀಂದರ್ ರೈನಾ, ಈಗಾಗಲೇ ರಾಜ್ಯಪಾಲ ಸತ್ಯಪಾಲ್ ಸಿಂಗ್ ಅವರು ವಿಧಾನಸಭೆಯನ್ನು ವಿಸರ್ಜಿಸಿದ್ದಾರೆ. ಹೀಗಾಗಿ ವಿಧಾನಸಭೆ ಚುನಾವಣೆಗೆ ನಾವು ಸಿದ್ಧರಾಗಬೇಕಿದೆ. ಹೀಗಾಗಿ ನಮ್ಮ ಶಾಸಕರ ಸಭೆ ಕರೆದಿದ್ದು, ಚುನಾವಣೆ ಸಂಬಂಧ ಚರ್ಚೆ ನಡೆಸಲಾಗುತ್ತದೆ. ಅಂತೆಯೇ ಮುಂಬರುವ ಲೋಕಸಭಾ ಚುನಾವಣೆಯೊಂದಿಗೇ ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯಬೇಕು ಎಂದು ಹೇಳಿದರು.

Jammu & Kashmir,Assembly Elections,should be Lok Sabha polls,BJP

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ